ಹೆಣ್ಣು ಮಕ್ಕಳಿಗೆ ಗುಡ್‌ ನ್ಯೂಸ್‌ – ಪ್ರತಿ ತಿಂಗಳು ಸರ್ಕಾರದಿಂದ 1,000 ರೂ.!  

ಹೆಣ್ಣು ಮಕ್ಕಳಿಗೆ ಗುಡ್‌ ನ್ಯೂಸ್‌ – ಪ್ರತಿ ತಿಂಗಳು ಸರ್ಕಾರದಿಂದ 1,000 ರೂ.!  

ಹೆಣ್ಣು ಮಕ್ಕಳಿಗೆ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. 18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 1 ಸಾವಿರ ರೂಪಾಯಿ ಹಣವನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.

ಹೆಣ್ಣು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನ ಜಾರಿ ಮಾಡುತ್ತಲೇ ಇದೆ. ಇದೀಗ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯ ಅಡಿಯಲ್ಲಿ  18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣುಮಕ್ಕಳಿಗೆ ಸರ್ಕಾರವು ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ಸರ್ಕಾರ ಘೋಷಿಸಿದೆ. ಅಂದ ಹಾಗೆ ಈ ಯೋಜನೆ ಜಾರಿಯಾಗುತ್ತಿರುವುದು ಕರ್ನಾಟಕದಲ್ಲಿ ಅಲ್ಲ.. ಬದಲಾಗಿ ದೆಹಲಿಯಲ್ಲಿ..

ಇದನ್ನೂ ಓದಿ: ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್‌ – ಇಡಿ ಪ್ರಕರಣವನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್‌!

ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ 10ನೇ ಬಜೆಟ್‌ ನಲ್ಲಿ ಈ ಯೋಜನೆಯನ್ನು ಘೋಷಿಸಲಾಗಿದೆ.  ದೆಹಲಿ ಹಣಕಾಸು ಸಚಿವೆ ಅತಿಶಿ ಅವರು ಈ ಯೋಜನೆಯನ್ನು ಘೋಷಿಸಿದ್ದಾರೆ. ದೆಹಲಿ ಸರ್ಕಾರವು ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ಬರೋಬ್ಬರಿ ಎರಡು ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಈ ಬಗ್ಗೆ ಮಾತನಾಡಿರುವ ಹಣಕಾಸು ಸಚಿವೆ ಅತಿಶಿ, ಶಿಕ್ಷಣಕ್ಕೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕಾಗಿ 16,396 ಕೋಟಿ ವೆಚ್ಚವನ್ನು ನಮ್ಮ ಸರ್ಕಾರ ಭರಿಸುತ್ತಿದೆ. ಇದುವರೆಗೆ ಶ್ರೀಮಂತ ಕುಟುಂಬದ ಮಗು ಮಾತ್ರ ಶ್ರೀಮಂತನಾಗಿರುತ್ತಾನೆ. ಬಡ ಕುಟುಂಬದ ಮಗು ಬಡವನಾಗಿದ್ದನು. ಇದು ರಾಮರಾಜ್ಯ ಪರಿಕಲ್ಪನೆಗೆ ಸಂಪೂರ್ಣ ವಿರುದ್ಧವಾಗಿತ್ತು. ಕೇಜ್ರಿವಾಲ್ ಸರ್ಕಾರ ಅದನ್ನು ಬದಲಾಯಿಸಿದೆ. ಇಂದು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 2,121 ಮಕ್ಕಳು ಜೆಇಇ ಮತ್ತು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಶಿಕ್ಷಣ ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

Shwetha M