ಈ ಸಲ ಕಪ್ ಇವರಿಗೆ.. – ಐಪಿಎಲ್ ನಲ್ಲಿ ಟ್ರೋಫಿ ಗೆಲ್ಲುವ ತಂಡ ಯಾವುದೆಂದು ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್!

ಈ ಸಲ ಕಪ್ ಇವರಿಗೆ.. – ಐಪಿಎಲ್ ನಲ್ಲಿ ಟ್ರೋಫಿ ಗೆಲ್ಲುವ ತಂಡ ಯಾವುದೆಂದು ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್!

ಐಪಿಎಲ್​ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಆದ್ರೆ ಕಪ್ ಗೆಲ್ಲುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕನಸು ಕನಸಾಗಿಯೇ ಉಳಿದಿದೆ. ಕಳೆದ 16 ಸೀಸನ್​ಗಳಲ್ಲಿ 3 ಬಾರಿ ಫೈನಲ್ ಪ್ರವೇಶಿಸಿದರೂ ಆರ್​ಸಿಬಿಗೆ ಚಾಂಪಿಯನ್ ಪಟ್ಟ ಸಿಕ್ಕಿಲ್ಲ. ಇದೀಗ 17ನೇ ಸೀಸನ್​ ಆರಂಭಕ್ಕೂ ಮುನ್ನವೇ ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಮೊದಲ ಟಿ-20 ಪಂದ್ಯ ಗೆದ್ದ ಟೀಮ್ ಇಂಡಿಯಾ –ರನೌಟ್ ಮಾಡಿಸಿದ ಗಿಲ್ ಮೇಲೆ ರೋಹಿತ್ ಶರ್ಮಾ ಕಿಡಿಕಿಡಿ..!

ಈ ಸಲ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಯಲ್ಲಾಗಿಯೇ ಟ್ರೋಫಿ ಎತ್ತಿ ಹಿಡಿಯಲಿದೆ. 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಬಿ ಡಿವಿಲಿಯರ್ಸ್ ನಾನಂತು ಸಾಕಷ್ಟು ಆಶಾವಾದಿಯಾಗಿದ್ದೇನೆ. ಈ ಸಲ ಖಂಡಿತವಾಗಿಯೂ ಆರ್​ಸಿಬಿ ತಂಡ ಕಪ್ ಗೆಲ್ಲುವ ವಿಶ್ವಾಸವಿದೆ. ಅದರಂತೆ ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳಲಿದೆ ಎಂದು ಎಬಿ ಡಿವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ. RCB ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು.

Shwetha M