ಪಾಕಿಸ್ತಾನದ ಗೂಗಲ್ ಸರ್ಚಿಂಗ್‌ನಲ್ಲಿ ನಂ.1 ಸ್ಥಾನ ಪಡೆದ ಅಭಿಷೇಕ್ ಶರ್ಮಾ

ಅಭಿಷೇಕ್ ಶರ್ಮಾಗೆ ಗೂಗಲ್ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗೂಗಲ್ 2025 ರ ಅತ್ಯಂತ ಟ್ರೆಂಡಿಂಗ್ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಯಾವ ದೇಶದಲ್ಲಿ ಯಾವ ಆಟಗಾರನನ್ನು ಗೂಗಲ್‌ನಲ್ಲಿ ಹೆಚ್ಚು ಸರ್ಚ್ ಮಾಡಿದ್ದಾರೆ ಎಂಬ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಆದ್ರೆ ಇವರು ನಮ್ಮ ದೇಶದಲ್ಲಿ ಅಲ್ಲ.. ನಮ್ಮ ಶತ್ರುದೇಶ ಪಾಕಿಸ್ತಾನದಲ್ಲಿ ನಂಬರ್ 1 ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ: ಗಂಭೀರ್ ಗೆ ಗೊತ್ತಾಯ್ತಾ RO-KO ಗತ್ತು – ಯಂಗ್ ಸ್ಟರ್ಸ್ FORMULA ಫ್ಲಾಪ್!
ಹೌಗು 2025ರಲ್ಲಿ ಪಾಕಿಸ್ತಾನದಲ್ಲಿ ಗೂಗಲ್‌ನಲ್ಲಿ ಹೆಚ್ಚು ಟ್ರೆಂಡಿಂಗ್ ಆದ ಆಟಗಾರರ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ನಂಬರ್-1 ಸ್ಥಾನ ಪಡೆದಿದ್ದಾರೆ. ಪಾಕ್ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ, ಮೊಹಮ್ಮದ್ ರಿಝ್ವಾನ್ನಂತಹ ಆಟಗಾರರನ್ನೇ ಹಿಂದಿಕ್ಕಿ ಅಭಿಷೇಕ್ ಶರ್ಮಾ ಪಾಕಿಸ್ತಾನದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಪಾಕಿಸ್ತಾನದ ಗೂಗಲ್ ಸರ್ಚ್ ಟ್ರೆಂಡಿಂಗ್ ಪಟ್ಟಿಯ ಟಾಪ್-10 ನಲ್ಲಿ ಅಲ್ಲಿನ ಸ್ಟಾರ್ ಆಟಗಾರರಾದ ಬಾಬರ್ ಆಝಂ, ಶಾಹೀನ್ ಶಾ ಅಫ್ರಿದಿ ಕಾಣಿಸಿಕೊಂಡಿಲ್ಲ. ಅಲ್ಲದೆ ಹೊಸ ಸೆನ್ಸೇಷನ್ ಸೃಷ್ಟಿಸಿದ್ದ ಯುವ ದಾಂಡಿಗ ಸೈಮ್ ಅಯ್ಯೂಬ್ ಆರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಪಾಕಿಸ್ತಾನ್ ಆಟಗಾರರ ಬದಲಾಗಿ ಈ ವರ್ಷ ಪಾಕಿಗಳು ಅಭಿಷೇಕ್ ಶರ್ಮಾ ಬಗ್ಗೆ ಹೆಚ್ಚು ಹುಡುಕಾಡಿದ್ದಾರೆ.
ಇನ್ನು ಈ ವರ್ಷ ಭಾರತದಲ್ಲಿ ಹೆಚ್ಚು ಹುಡುಕಲ್ಪಟ್ಟ ಆಟಗಾರ 14 ವರ್ಷದ ವೈಭವ್ ಸೂರ್ಯವಂಶಿ ಕಾಣಿಸಿಕೊಂಡಿದ್ದಾರೆ. ಭರ್ಜರಿ ಬ್ಯಾಟಿಂಗ್ನೊಂದಿಗೆ ಅಬ್ಬರಿಸುತ್ತಿರುವ ವೈಭವ್ ಬಗ್ಗೆ ಭಾರತೀಯರು ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ್ದಾರೆ. ಅಂದರೆ ಭಾರತ ಮತ್ತು ಪಾಕಿಸ್ತಾನದಲ್ಲಿ ಟೀಮ್ ಇಂಡಿಯಾದ ಇಬ್ಬರು ಎಡಗೈ ದಾಂಡಿಗರ ಬಗ್ಗೆ ಗೂಗಲ್‌ನಲ್ಲಿ ಹೆಚ್ಚು ಹುಡುಕಾಟ ನಡೆಸಿರುವುದು ವಿಶೇಷ.

ನೋಡಿರಿ

