ಅಭಿಷೇಕ್ ಶರ್ಮಾಗೆ ಚೊಚ್ಚಲ ಐಸಿಸಿ ಪ್ರಶಸ್ತಿ – ಸ್ಮೃತಿ ಮಂಧಾನಗೂ ಐಸಿಸಿ ಪ್ರಶಸ್ತಿಯ ಗೌರವ

ಅಭಿಷೇಕ್ ಶರ್ಮಾಗೆ ಚೊಚ್ಚಲ ಐಸಿಸಿ ಪ್ರಶಸ್ತಿ – ಸ್ಮೃತಿ ಮಂಧಾನಗೂ ಐಸಿಸಿ ಪ್ರಶಸ್ತಿಯ ಗೌರವ

ಟೀಮ್ ಇಂಡಿಯಾದ ಸ್ಫೋಟಕ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಐಸಿಸಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತೀಯ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ ಕೂಡಾ ಐಸಿಸಿ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಇದನ್ನೂ ಓದಿ:ರೋಹಿತ್ ಓಪನರ್.. ಕೊಹ್ಲಿ ನಂ.3 – AUS ಬೌಲಿಂಗ್ ಸ್ಟ್ರಾಂಗ್ ಇದ್ಯಾ?

ಸೆಪ್ಟೆಂಬರ್ ತಿಂಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬ್ಯಾಟರ್ ಅಭಿಷೇಕ್ ಶರ್ಮಾ ಐಸಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ದುಬೈನಲ್ಲಿ ನಡೆದ ಏಷ್ಯಾ ಕಪ್ 2025  ಪಂದ್ಯಾವಳಿಯಲ್ಲಿ ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಜೊತೆಗೆ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಈ ಪಂದ್ಯಾವಳಿಯಲ್ಲಿ 7 ಪಂದ್ಯಗಳನ್ನು ಆಡಿದ ಅಭಿಷೇಕ್ ಶರ್ಮಾ, 200 ಸ್ಟ್ರೈಕ್ ರೇಟ್ ಮತ್ತು 44.58 ರ ಸರಾಸರಿಯಲ್ಲಿ 314 ರನ್ ಗಳಿಸಿ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ಪಡೆದಿದ್ದರು. ಐಸಿಸಿ ಟಿ20 ಶ್ರೇಯಾಂಕದಲ್ಲಿ ಅಗ್ರ ರೇಟಿಂಗ್ ಅಂಕಗಳನ್ನು ಹೊಂದಿರುವ ಅಭಿಷೇಕ್ ಶರ್ಮಾ, ವಿಶ್ವದ ನಂಬರ್ ಒನ್ ಟಿ 20 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಈ ಪ್ರದರ್ಶನದೊಂದಿಗೆ, ಅಭಿಷೇಕ್ ಶರ್ಮಾ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಅಂದಹಾಗೆ ಇದು ಅಭಿಷೇಕ್ ಶರ್ಮಾ ಅವರ ವೃತ್ತಿಜೀವನದಲ್ಲಿ ಮೊದಲ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ.

ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರಿಗೂ ಐಸಿಸಿ ತಿಂಗಳ ಮಹಿಳಾ ಕ್ರಿಕೆಟರ್ ಪ್ರಶಸ್ತಿ ಲಭಿಸಿದೆ. ಆಸ್ಟ್ರೇಲಿಯಾ ವಿರುದ್ಧದ ತವರು ಏಕದಿನ ಸರಣಿಯಲ್ಲಿ ಮಂಧಾನ ಅದ್ಭುತ ಪ್ರದರ್ಶನ ನೀಡಿದ್ದರು. ಸೆಪ್ಟೆಂಬರ್​ನಲ್ಲಿ ಆಡಿದ ನಾಲ್ಕು ಏಕದಿನ ಪಂದ್ಯಗಳಲ್ಲಿ ಮಂದಾನ 308 ರನ್ ಗಳಿಸಿದ್ದರು.

Sulekha