ಆಸ್ಪತ್ರೆಗೆ ಹೋದವರು ಸೇರಿದ್ದು ಮಸಣ – ಕ್ರೂಸರ್ ಮತ್ತು ಲಾರಿ ಡಿಕ್ಕಿ, ಒಂದೇ ಕುಟುಂಬದ ಐವರು ಬಲಿ!

ಆಸ್ಪತ್ರೆಗೆ ಹೋದವರು ಸೇರಿದ್ದು ಮಸಣ – ಕ್ರೂಸರ್ ಮತ್ತು ಲಾರಿ ಡಿಕ್ಕಿ, ಒಂದೇ ಕುಟುಂಬದ ಐವರು ಬಲಿ!

ಕಲಬುರಗಿಯ ಜಿಲ್ಲೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಆಸ್ಪತ್ರೆಗೆ ಹೋದವರು ಮಸಣ ಸೇರಿದ್ದಾರೆ.  ಜಿಲ್ಲೆಯ ಚಿತ್ತಾಪೂರ ತಾಲೂಕಿನ ಲಾಡ್ಲಾಪೂರ ಬಳಿ ತಡರಾತ್ರಿ ಕ್ರೂಸರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಮೃತ ಐವರೂ ಚಿತ್ತಾಪೂರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಕ್ರೂಸರ್ ಚಾಲಕ ಟೋಲು ಪಾಶಾ ( 27 ), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) , ಫಾತಿಮಾ (38) ಇನ್ನೊಬ್ಬ ಸೇರಿ ಐವರು ಸಾವನ್ನಪ್ಪಿದ್ದಾರೆ. ಇದರಲ್ಲಿ ಫಾತಿಮಾ ಗರ್ಭಿಣಿ ಅನ್ನೋದು ತಿಳಿದು ಬಂದಿದೆ.

ಇಂಗಳಗಿಯಿಂದ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಯಾದಗಿರಿ ಆಸ್ಪತ್ರೆಗೆ ದಾಖಲಿಸಿ ಐವರು ಕ್ರೂಸರನಲ್ಲಿ ವಾಪಾಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.  ಕ್ರೂಸರ್ ಸಂಪೂರ್ಣವಾಗಿ ಪುಡಿಪುಡಿಯಾಗಿದೆ. ಘಟನಾ ಸ್ಥಳಕ್ಕೆ ವಾಡಿ ಪೊಲೀಸರು ಧಾವಿಸಿ, ಶವಗಳನ್ನು ವಾಡಿ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.ವಾಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ

ಇನ್ನೂ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ  ಸಂತಾಪ ವ್ಯಕ್ತಪಡಿಸಿದ್ದಾರೆ.  ಅಮೂಲ್ಯ ಜೀವಗಳು ಅಪಘಾತಕ್ಕೆ ಬಲಿಯಾಗಿರುವುದರ ಬಗ್ಗೆ ನೋವು ವ್ಯಕ್ತಪಡಿಸಿ, ” ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ ಕುಟುಂಬ ವರ್ಗವು ಧೈರ್ಯ ತಂದುಕೊಳ್ಳಬೇಕು ಎಂದಷ್ಟೇ ಈಗ ಹೇಳಬಹುದಾದ ಸಮಾಧಾನದ ಮಾತುಗಳು” ಎಂದು ಪ್ರಿಯಾಂಕ್ ಹೇಳಿದ್ದಾರೆ.

Kishor KV

Leave a Reply

Your email address will not be published. Required fields are marked *