ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕ್ಸಿಡೆಂಟ್ – 5 ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ
ಚಳಿಗಾಲ ಆರಂಭವಾಗುತ್ತಿದ್ದಂತೆ ಎಲ್ಲೆಲ್ಲೂ ದಟ್ಟ ಮಂಜು ಆವರಿಸುತ್ತಿದೆ. ಮುಂಜಾನೆ ವೇಳೆ, ಸಂಜೆ ವೇಳೆ ಭಾರಿ ಪ್ರಮಾಣದ ಮಂಜು ಬೀಳುತ್ತಿದೆ. ರಸ್ತೆ ತುಂಬೆಲ್ಲಾ ಮಂಜು ಆವರಿಸಿರುವುದರಿಂದಾಗಿ ವಾಹನ ಸವಾರರಿಗೆ ಭಾರಿ ತೊಂದರೆಯಾಗುತ್ತಿದೆ. ಇದರಿಂದಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ, ನೆಲಮಂಗಲ ತಾಲೂಕಿನ ತೊಣಚಿನಗುಪ್ಪೆ ಬಳಿ ಸರಣಿ ಅಪಘಾತ ನಡೆದಿದೆ. ಈ ಅಪಘಾತದಲ್ಲಿ 25 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಹೊಸ ವರ್ಷಾಚರಣೆಯಂದು ನಂದಿ ಬೆಟ್ಟಕ್ಕೆ ನೋ ಎಂಟ್ರಿ! – ಡಿ. 31, ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದ ಜಿಲ್ಲಾಡಳಿತ!
ಬುಧವಾರ ಮುಂಜಾಬೆ 5 ಖಾಸಗಿ ಬಸ್ ಗಳ ನಡುವೆ ಈ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಘಟನೆ ವಿಚಾರ ತಿಳಿಯುತ್ತಿದ್ದಂತೆ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಸ್‌ಗಳನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ. ಅಲ್ಲದೆ ಸ್ಥಳೀಯರ ನೆರವಿನೊಂದಿಗೆ ಬಸ್ ಬಸ್ ಗಳ ಮಧ್ಯೆ ಸಿಲುಕಿರುವ ಜನರು ಜನರನ್ನ ಹೊರಗೆ ತೆಗೆಯಲು ಹರಸಾಹಸ ಪಡುತ್ತಿದ್ದಾರೆ.