ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್ ಕೊಹ್ಲಿ, ಸಚಿನ್ ಅಲ್ಲವೇ ಅಲ್ಲ –ಗೌತಮ್ ಗಂಭೀರ್ ಪ್ರಕಾರ ಯುವರಾಜ್ ಸಿಂಗ್ ಶ್ರೇಷ್ಠ ಬ್ಯಾಟ್ಸ್ ಮನ್
ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ ಮನ್ ಯಾರು ಎಂದು ಕೇಳಿದರೆ ಯಾರಾದರೂ ಸುನಿಲ್ ಗವಾಸ್ಕರ್, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ರನ್ ಮೆಷಿನ್ ವಿರಾಟ್ ಕೊಹ್ಲಿ, ಮಹೇಂದ್ರ ಸಿಂಗ್ ಧೋನಿ ಎಂದು ಯಾರು ಬೇಕಾದರೂ ಹೇಳುತ್ತಾರೆ. ಆದರೆ, ಈ ಕ್ರಿಕೆಟಿಗರ ಹೆಸರು ಹೇಳಿ ಆಯ್ಕೆ ಕೊಟ್ಟರೂ ಕೂಡಾ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಇವರೆಲ್ಲಾ ಶ್ರೇಷ್ಠ ಬ್ಯಾಟ್ಸ್ಮನ್ ಅಲ್ಲವೇ ಅಲ್ಲ. ಇವರ ಪ್ರಕಾರ ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಬೇರೆ ಒಬ್ಬರು.
ಇದನ್ನೂ ಓದಿ: ‘ಕ್ರಿಕಿಟಿಗನಾಗಿದ್ದಕ್ಕೆ ಪಶ್ಚಾತ್ತಾಪ ಪಡುತ್ತಿದ್ದೇನೆ’ – ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೀಗೆ ಹೇಳಲು ಕಾರಣ ಏನು?
ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ತಮ್ಮ ಹೇಳಿಕೆಯಿಂದ ಸದಾ ಸುದ್ದಿಯಲ್ಲಿರುತ್ತಾರೆ. ಏಷ್ಯಾಕಪ್ ವೇಳೆ ಗೌತಮ್ ಗಂಭೀರ್ ಮಧ್ಯದ ಬೆರಳು ತೋರಿ ಟೀಕೆಗೆ ಗುರಿಯಾಗಿದ್ದರು. ಇದೀಗ ಸಂದರ್ಶನವೊಂದರಲ್ಲಿ ಗೌತಮ್ ಗಂಭೀರ್‌ಗೆ ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಯಾರು ಎಂದು ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಗೌತಮ್, ಸುನಿಲ್ ಗವಾಸ್ಕರ್, ಮಹೇಂದ್ರ ಸಿಂಗ್ ಧೋನಿ ಅಥವಾ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಯಾರನ್ನೂ ಹೆಸರಿಸದೆ ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ನನ್ನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಎಂದಿದ್ದಾರೆ. ರಾಪಿಡ್ ಫೈರ್ ಸುತ್ತಿನಲ್ಲಿ ಗೌತಮ್ ಗಂಭೀರ್ ಅವರಿಗೆ ಭಾರತದ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಯಾರು? ಎಂದು ಕೇಳಲಾಗಿದೆ. ಈ ಪ್ರಶ್ನೆಗೆ ವಿರಾಟ್ ಕೊಹ್ಲಿ, ಸುನಿಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್ ಎಂಬ ಮೂರು ಆಯ್ಕೆಗಳನ್ನು ನೀಡಲಾಗಿತ್ತು. ಆದರೆ ಈ ಪೈಕಿ ಯಾರನ್ನೂ ಆಯ್ಕೆ ಮಾಡದ ಗೌತಮ್ ಗಂಭೀರ್, ನನ್ನ ಪ್ರಕಾರ ಯುವರಾಜ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಎಂದರು. ಗಂಭೀರ್ ಆಯ್ಕೆಯಲ್ಲೂ ಸತ್ವವಿದ್ದು, ಟೀಂ ಇಂಡಿಯಾದಲ್ಲಿ ಆಲ್ರೌಂಡರ್ ಆಗಿ ಯುವರಾಜ್ ಸಿಂಗ್ ಅನೇಕ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅಲ್ಲದೆ 2007ರ ಟಿ20 ವಿಶ್ವಕಪ್ ಮತ್ತು 2011ರ ಏಕದಿನ ವಿಶ್ವಕಪ್ನಲ್ಲಿ ಯುವರಾಜ್ ಸಿಂಗ್ ಅದ್ಭುತ ಪ್ರದರ್ಶನ ನೀಡಿದ್ದರು. ಇದರೊಂದಿಗೆ 2011ರ ವಿಶ್ವಕಪ್ನಲ್ಲಿನ ಆಟಕ್ಕಾಗಿ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ಕೂಡ ಗೆದ್ದಿದ್ದರು. ಆದರೆ ಸಾಕಷ್ಟು ಸಂದರ್ಶನಗಳಲ್ಲಿ ಗಂಭೀರ್, 2011ರ ವಿಶ್ವಕಪ್ನ ಗೆಲುವಿನ ಕ್ರೇಡಿಟ್ ಅನ್ನು ಸಚಿನ್ ತೆಂಡೂಲ್ಕರ್, ಜಹೀರ್ ಖಾನ್, ಧೋನಿ ಅವರಿಗೆ ನೀಡಲಾಗುತ್ತದೆ. ಆದರೆ ನಿಜವಾಗಿಯೂ ವಿಶ್ವಕಪ್ ಗೆಲುವಿನ ಶ್ರೇಯ ಯುವರಾಜ್ ಸಿಂಗ್‌ಗೆ ನೀಡಬೇಕು ಎಂದು ಹೇಳುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. .