ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ದುಬೈಗೆ ಶಿಫ್ಟ್!‌ – ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ರೇವಣ್ಣ

ಪ್ರಜ್ವಲ್‌ ರೇವಣ್ಣ ಜರ್ಮನಿಯಿಂದ ದುಬೈಗೆ ಶಿಫ್ಟ್!‌ – ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ ರೇವಣ್ಣ

ಹಾಸನದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಇಡೀ ರಾಜ್ಯ, ದೇಶಾದ್ಯಂತ ಸುದ್ದಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾದ ಮೇಲೆ SIT ತನಿಖೆ ಚುರುಕಾಗಿದೆ. ತನಿಖೆ ನಡೆಯುತ್ತಿರುವಾಗಲೇ ಕೇಸ್‌ಗೆ ಟ್ವಿಸ್ಟ್‌ ಮೇಲೆ ಟ್ವಿಸ್‌ ಸಿಗುತ್ತಿದೆ. ಇದೀಗ ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲಿ ಇಲ್ಲ ಎಂಬ ಸ್ಪೋಟಕ ವಿಚಾರ ಬಯಲಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಅರೆಸ್ಟ್‌! – ಗೃಹಸಚಿವ ಖಡಕ್‌ ವಾರ್ನಿಂಗ್‌

ಲೋಕಸಭಾ ಚುನಾವಣೆ ಮುಗಿದ ಬಳಿಕ ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದರು. ಬಳಿಕ ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲೇ ಇದ್ದಾರೆ. ಭಾರತಕ್ಕೆ ಮೇ 16 ರಂದು ವಾಪಸ್‌ ಬರಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಬುಧವಾರ ವಿಚಾರಣೆಗೆ ಹಾಜರಾಗಲು 7 ದಿನ ಕಾಲಾವಕಾಶ ನೀಡುವಂತೆ ವಿಶೇಷ ತನಿಖಾ ತಂಡದ ಬಳಿ ಮನವಿ ಮಾಡಿದ್ದರು. ಜರ್ಮನಿಯಲ್ಲಿದ್ದ ಪ್ರಜ್ವಲ್‌ ರೇವಣ್ಣ  ಬುಧವಾರ ದುಬೈಗೆ ಶಿಫ್ಟ್‌ ಆಗಿದ್ದಾರೆ. ಇದೀಗ ದುಬೈಗೆ ಬಂದ ಹಿನ್ನೆಲೆಯಲ್ಲಿ ನೇರವಾಗಿ ಪ್ರಜ್ವಲ್‌ ರೇವಣ್ಣ ಶೀಘ್ರವೇ ಬೆಂಗಳೂರಿಗೆ ಬರುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

ಇನ್ನು ಮಗ ಫಾರಿನ್‌ನಲ್ಲಿ ಇದ್ರೆ, ತಂದೆ ಪ್ರಜ್ವಲ್‌ ರೇವಣ್ಣ ಕಾನೂನು ಸಂಕಷ್ಟದಿಂದ ಪಾರಾಗಲು ಮುಂದಾಗಿದ್ದಾರೆ. ಪೂಜೆ ಪುನಸ್ಕಾರ, ಹೋಮ ಹವನಗಳಲ್ಲಿ ಬ್ಯೂಸಿಯಾಗಿದ್ದ ರೇವಣ್ಣ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.  ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿರುವುದು ಕುತೂಹಲ ಮೂಡಿಸಿದೆ.

Shwetha M