ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪೈಶಾಚಿಕ ಕೃತ್ಯ – ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪೈಶಾಚಿಕ ಕೃತ್ಯ – ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಈ ಘಟನೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿಬಿದ್ದಿದೆ. ಮೂವರು ವಿದ್ಯಾರ್ಥಿನಿಯರು ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರು. ಇವರಲ್ಲಿ ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಬ್ಲಾಸ್ಟ್‌ ಕೇಸ್‌ – ಪ್ರಕರಣ ಬೇದಿಸಲು ಎನ್‌ಐಎಗೆ ಎಂಟ್ರಿ

ಮಂಗಳೂರಿನ ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಬೆಚ್ಚಿ ಬೀಳುವ ಪೈಶಾಚಿಕ ಘಟನೆಯೊಂದು ನಡೆದಿದೆ. ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಕಿರಾತಕನೊಬ್ಬ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿ.ಬಿ, ಅರ್ಚನಾ ಹಾಗೂ ಅಮೃತ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಕಡಬ ಸರ್ಕಾರಿ ಶಾಲೆಯಲ್ಲಿ ಘಟನೆ ನಡದಿದ್ದು, ಆರೋಪಿ ಮುಖಕ್ಕೆ ಮಾಸ್ಕ್ ಹಾಗೂ ತಲೆಗೆ ಹ್ಯಾಟ್ ಹಾಕಿಕೊಂಡು ಬಂದು ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ಆರೋಪಿ ಕೇರಳ ಮೂಲದ ಅಬೀನ್ ಎಂಬಾತನನ್ನು ಬಂಧಿಸಲಾಗಿದೆ.

Sulekha