ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯರಿಗೆ ಬಿಡುಗಡೆ ಭಾಗ್ಯ – ವಿದೇಶಾಂಗ ವ್ಯವಹಾರ ಸಚಿವಾಲಯ ಮಾಹಿತಿ

ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯರಿಗೆ ಬಿಡುಗಡೆ ಭಾಗ್ಯ – ವಿದೇಶಾಂಗ ವ್ಯವಹಾರ ಸಚಿವಾಲಯ ಮಾಹಿತಿ

ರಷ್ಯಾದಲ್ಲಿ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ  ಭಾರತೀಯರಿಗೆ ಕೊನೆಗೂ ಬಿಗ್‌ ರಿಲೀಫ್‌ ಸಿಕ್ಕಿದೆ.. ರಷ್ಯಾ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯ ಖಾತರಿ ಪಡಿಸಿದೆ.

ಕರ್ನಾಟಕ ಸೇರಿದಂತೆ ದೇಶದ ಹಲವು ಯುವಕರು ಕೆಲಸಕ್ಕಾಗಿ ರಷ್ಯಾಗೆ ತೆರಳಿದ್ದರು. ಈ ವೇಳೆ ಅವರನ್ನು ಬಲವಂತವಾಗಿ ಸೇನೆಗೆ ಸೇರಿಸಿಕೊಳ್ಳಲಾಗಿತ್ತು. ನಾವು ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮ್ಮನ್ನು ಬಲವಂತವಾಗಿ ಸೇನೆಗೆ ಸೇರಿಕೊಳ್ಳಲಾಗಿದೆ ಎಂದು ಭಾರತೀಯರು ಅಳಲನ್ನು ತೋಡಿಕೊಂಡಿದ್ದರು. ಇದೀಗ ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಹಲವು ಮಂದಿ ಭಾರತೀಯರನ್ನು ಬಿಡುಗಡೆಗೊಳಿಸಲಾಗಿದೆ.

ಇದನ್ನೂ ಓದಿ: ಬೇಸಿಗೆ ಮುನ್ನವೇ ನೀರಿಲ್ಲ.. ನೀರಿಲ್ಲ..- ಕುಡಿಯಲು ಜೀವಜಲವಿಲ್ಲದೆ ಬೆಳಗಾವಿ, ರಾಯಚೂರು ಜನರ ಹಾಹಾಕಾರ

ರಷ್ಯಾ ಸೇನೆಯಿಂದ ಭಾರತೀಯ ಪ್ರಜೆಗಳ ಬಿಡುಗಡೆ ಕುರಿತಂತೆ ರಷ್ಯಾದ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಮಾತುಕತೆ ನಡೆಸುವುದು ಭಾರತದ ಪ್ರಮುಖ ಆದ್ಯತೆಯ ವಿಷಯವಾಗಿದೆ. ರಷ್ಯಾದ ಸೇನೆಯಲ್ಲಿರುವ ಭಾರತೀಯರು ಬಿಡುಗಡೆಯ ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ಕೆಲವು ತಪ್ಪಾದ ವರದಿಗಳನ್ನು ನಾವು ನೋಡಿದ್ದೇವೆ. ಮಾಸ್ಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತರಲಾದ ಅಂತಹ ಪ್ರತಿಯೊಂದು ಪ್ರಕರಣವನ್ನು ರಷ್ಯಾದ ಅಧಿಕಾರಿಗಳೊಂದಿಗೆ ಬಲವಾಗಿ ಚರ್ಚಿಸಿ, ಬಿಡುಗಡೆಗೆ ಒತ್ತಾಯಿಸಲಾಗಿದೆ. ಸಚಿವಾಲಯದ ಗಮನಕ್ಕೆ ತಂದವುಗಳನ್ನು ನವದೆಹಲಿಯಲ್ಲಿರುವ ರಷ್ಯಾದ ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಇದರ ಪರಿಣಾಮ ಹಲವು ಭಾರತೀಯರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ(ಎಂಇಎ) ತಿಳಿಸಿದೆ.

ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆಗೆ ಕೋರಿ ರಷ್ಯಾ ಅಧಿಕಾರಿಗಳ ಜೊತೆ ಸತತ ಸಂಪರ್ಕದಲ್ಲಿದ್ದೇವೆ. ಉಕ್ರೇನ್‌ನಲ್ಲಿನ ಸಂಘರ್ಷ ವಲಯದಿಂದ ದೂರವಿರಲು ಭಾರತೀಯರಿಗೆ ಸೂಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದರು.

Shwetha M