ಕರಾವಳಿಯಿಂದ ತಿಮರೋಡಿ ಔಟ್- ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು

ಕರಾವಳಿಯಿಂದ  ತಿಮರೋಡಿ ಔಟ್- ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕರವಾಳಿಯಿಂದ ಗಡಿಪಾರು ಆಗಿದ್ದಾರೆ.  ಸೌಜನ್ಯ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಆದೇಶ ಹೊರಡಿಸಿದ್ದು, ತಿಮರೋಡಿ ವಿರುದ್ಧ 32 ಪ್ರಕರಣಗಳು ದಾಖಲಾಗಿವೆ. ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ತಿಮರೋಡಿ  ವಿರುದ್ಧ  32 ಕೇಸ್

ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್‌   ಆದೇಶ ಹೊರಡಿಸಿದ್ದಾರೆ. ತಿಮರೋಡಿ ಅವರ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು. ಇದಾದ ಬೆನ್ನಲ್ಲೇ ಈ ಗಡಿಪಾರು ಆದೇಶ ಹೊರಬಿದ್ದಿದೆ.

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಹಾಗೂ ನೇತ್ರಾವತಿ ನದಿ ತೀರದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಮಹೇಶ್ ಶೆಟ್ಟಿ ತಿಮರೋಡಿ ಆಶ್ರಯ‌ ನೀಡಿದ್ದರು. ಇನ್ನು ತಿಮರೋಡಿ ಗಡಿಪಾರಿನ ಬಗ್ಗೆ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲಾ ವರ್ಗೀಸ್ ಆದೇಶ ಮಾಡಿದ್ದಾರೆ.  1 ವರ್ಷದ ಮಟ್ಟಿಗೆ ತಿಮರೋಡಿಯನ್ನು ಗಡಿಪಾರು ಮಾಡಲಾಗಿದ್ದು, ಈ ಅವಧಿಯಲ್ಲಿ ಅವರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

Kishor KV