17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಪ್ರಕಾಶ್ ರಾಜ್ (ರೈ) ರಾಯಭಾರಿ

ಜನವರಿ 29ರಿಂದ ಫೆಬ್ರವರಿ 06ರವರೆಗೆ ಆಯೋಜಿಸಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಹಿರಿಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕರು ಆದ ಪ್ರಕಾಶ್ ರಾಜ್ಅ ವರನ್ನು ನೇಮಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಲನಚಿತ್ರೋತ್ಸವದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ ಎಂದು ಸಿಎಂ ತಿಳಿಸಿದರು.
ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲೀಸ್ನ 11 ಸ್ಕ್ರೀನ್ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ.
ಇದನ್ನೂ ಓದಿ: ಕಾಂತಾರ ಚಾಪ್ಟರ್ 1 ಬೀಟ್ ಮಾಡಿದ ಧುರಂಧರ್! – ನಂ.1 ಪಟ್ಟಕ್ಕೇರಿದ ರಣವೀರ್ ಸಿಂಗ್ ಸಿನಿಮಾ!
ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ. 17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ ಎಂದು ಹೇಳಿದರು.

ನೋಡಿರಿ

