ನಟ ದರ್ಶನ್‌ ಗೆ ಮುಗಿಯದ ಸಂಕಷ್ಟ! – ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ!

ನಟ ದರ್ಶನ್‌ ಗೆ ಮುಗಿಯದ ಸಂಕಷ್ಟ! – ಸವಲತ್ತು ಕೋರಿದ ದರ್ಶನ್‌ ಅರ್ಜಿ 9ಕ್ಕೆ ಮುಂದೂಡಿಕೆ!

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಸೆರೆವಾಸ ಅನುಭವಿಸುವಂತೆ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ ಮೂಲ ಸೌಕರ್ಯ ಒದಗಿಸುವಂತೆ ಕೋರ್ಟ್‌ ಮೊರೆ ಹೋಗಿದ್ರು. ದರ್ಶನ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ 64ನೇ ಸಿಸಿಹೆಚ್ ನ್ಯಾಯಾಲದಲ್ಲಿ ನಡೆದಿದ್ದು, ಆದೇಶವನ್ನ ಅ. 9ಕ್ಕೆ ಕಾಯ್ದಿರಿಸಲಾಗಿದೆ.

ಇದನ್ನೂ ಓದಿ: BBKಯಲ್ಲಿ ರಕ್ಷಿತಾ ಶೆಟ್ಟಿಗೆ ಅನ್ಯಾಯ?  – NEXT ELIMINATION ಟಾರ್ಗೆಟ್ ಮಲ್ಲಮ್ಮ?

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ಗೆ ಹಾಸಿಗೆ, ದಿಂಬು ಸೇರಿದಂತೆ ಕನಿಷ್ಟ ಸವಲತ್ತುಗಳನ್ನು ಒದಗಿಸಲು ಕೋರ್ಟ್ ಆದೇಶವಿದೆ. ಆದ್ರೂ ಕೂಡ ನಟ ದರ್ಶನ್‌ ಗೆ ಯಾವುದೇ ಸವಲತ್ತನ್ನ ಒದಗಿಸಿಲ್ಲ. ಪರಪ್ಪನ ಅಗ್ರಹಾರ ಜೈಲಧಿಕಾರಿಗಳು ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ನಟ ದರ್ಶನ್ ಪರ ವಕೀಲರು ಜೈಲಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು 64ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆದಿದೆ.

ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನಕುಮಾರ್ ವಾದ ಆರಂಭಿಸಿದರು. ಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಸಹ ಮಾಡಲಾಗಿದೆ. ಚಾದರ್, ಹಾಸಿಗೆ ದಿಂಬು ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶ ಇಲ್ಲ. ಓಡಾಡಲು ಅವಕಾಶ ಕೇಳಿದರು, ಅದನ್ನು ಸಹ ಕೊಟ್ಟಿದ್ದೇವೆ. ಎಷ್ಟು ಜಾಗವಿದೆಯೋ ಅಲ್ಲಿ ಅವಕಾಶ ಕೊಟ್ಟಿದ್ದೇವೆ ಎಂದು ವಾದಿಸಿದರು.

ಆರೋಪಿ ದರ್ಶನ್ ಪರ ವಕೀಲ ಸುನಿಲ್ ವಾದ ಮಂಡಿಸಿದರು. ಜೈಲಾಧಿಕಾರಿಗಳಿಗೆ ಕೋರ್ಟ್ ನಿರ್ದೇಶನ ಅರ್ಥವಾಗಿಲ್ಲ. ಅಧಿಕಾರಿಗಳಿಗೆ ಇಂಗ್ಲಿಷ್ ಬರುತ್ತಿಲ್ಲವೆಂದು ಕಾಣುತ್ತದೆ. ಕೋರ್ಟ್ ಆದೇಶದ ಪ್ರತಿಯನ್ನು ಎಸೆದಿದ್ದಾರೆ. ಅವರು ಚಿನ್ನದ ಮಂಚವೇನೂ ಕೇಳಿಲ್ಲ. ಚೆಂಬು ಲೋಟ ಚಾಪೆ ಕೊಟ್ಟಿದ್ದಾರೆ. ಕಾರ್ಪೆಟ್ ಚಾದರ್ ಮೊದಲೇ ಕೊಟ್ಟಿದ್ದರು. ಕಂಬಳಿ ಮಾತ್ರ ಕೋರ್ಟ್ ಆದೇಶದ ಬಳಿಕ ಕೊಟ್ಟಿದ್ದಾರೆ. ಬ್ಯಾರಕ್ ಒಳಗೆ ಮಾತ್ರ ಅರ್ಧ ಗಂಟೆ ಓಡಾಡಲು ಬಿಟ್ಟಿದ್ದಾರೆ. ಹೊರಗಡೆ ಓಡಾಡಲು ಬಿಟ್ಟಿಲ್ಲ ಎಂದು ವಾದಿಸಿದರು.  ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅ.9ಕ್ಕೆಆದೇಶವನ್ನು ಕಾಯ್ದಿರಿಸಿದೆ.

Shwetha M