ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್? – ಆತಂಕದಲ್ಲಿ ಫ್ಯಾನ್ಸ್.. DGP ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರದಲ್ಲಿರುವ ದಾಸ ಜಾಮೀನು ಮೂಲಕ ಹೊರ ಬರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ದರ್ಶನ್ಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಬೆನ್ನಲ್ಲೇ ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅನ್ನೋ ಸುದ್ದಿ ಭಾರಿ ಸದ್ದು ಮಾಡಿತ್ತು. ಇದೀಗ ಈ ಬಗ್ಗೆ ಮಹಾನಿರ್ದೇಶಕ ಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಇದನ್ನೂ ಓದಿ: ದುಬಾರೆ ದುರಂತಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ! – 2019ರಲ್ಲೇ ಎಚ್ಚರಿಕೆ ನೀಡಿದ್ದ ತಜ್ಞರ ಸಮಿತಿ!
ನಟ ದರ್ಶನ್ಗೆ ಮೊನ್ನೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದ್ದು, ಮತ್ತೊಂದು ವರ್ಷ ಜೈಲಿನಲ್ಲಿಯೇ ಕಳೆಯುವಂತಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಖಿನ್ನತೆಗೆ ಜಾರಿದ್ದ ದರ್ಶನ್ ಆತ್ಮ*ಹತ್ಯೆಗೆ ಯತ್ನಿಸಿದ್ರು ಅನ್ನೋ ಸುದ್ದಿ ಸುಂಟರಗಾಳಿಯಂತೆ ಹಬ್ಬಿತ್ತು. ಇದ್ರಿಂದಾಗಿ ದರ್ಶನ್ ಅಭಿಮಾನಿಗಳು ಆತಂಕಗೊಂಡಿದ್ದರು. ಅಲ್ಲದೇ ಸಾಕಷ್ಟು ಅಭಿಮಾನಿಗಳು ಜೈಲಿನ ಬಳಿ ಬಂದಿದ್ರು ಎನ್ನಲಾಗ್ತಿದೆ. ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ತಿಳಿದ ಬೆನ್ನಲ್ಲೇ ಖುದ್ದು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಮಹಾನಿರ್ದೇಶಕ ಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ. ಇದೊಂದು ಶುದ್ಧ ಸುಳ್ಳು ಸುದ್ದಿ. ಯಾರೂ ಭಯಪಡಬೇಡಿ ಎಂದಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ. ಇದು ಗಾಳಿಸುದ್ದಿ ಎಂದಿದ್ದಾರೆ ಡಿಜಿಪಿ ಅಲೋಕ್ ಕುಮಾರ್. ಅಂತಹ ಯಾವುದೇ ಘಟನೆ ನಡೆದಿಲ್ಲ. ಈ ಸುದ್ದಿ ಸತ್ಯಕ್ಕೆ ದೂರವಾಗಿದೆ. ದರ್ಶನ್ ಚೆನ್ನಾಗಿದ್ದಾರೆ ಎಂದಿದ್ದಾರೆ.
ಈ ಹಿಂದೆ ನಟ ದರ್ಶನ್ ಅವರು ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಬಹುದು. ಅವರಿಗೆ ಸೂಕ್ತ ಮನೋರೋಗ ಚಿಕಿತ್ಸೆಯ ಅಗತ್ಯವಿದೆ ಎಂದು ಮೈಸೂರಿನ ಮನರೋಗ ತಜ್ಞ ಡಾ. ಅಭಿಜಿತ್ ಹನಹೋಡು ಅವರು ಹೇಳಿದ್ದರು. ಇದೀಗ ಆಘಾತಕಾರಿ ವದಂತಿ ಹರಡಿದ್ದು, ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ.
ಇನ್ನು ನಿನ್ನೆಯಷ್ಟೇ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಅವರು ವಿವಾಹ ವಾರ್ಷಿಕೋತ್ಸವದ ನಿಮಿತ್ತ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದರು. ಈ ವೇಳೆ ನಟ ದರ್ಶನ್ ಅವರು ಪತ್ನಿ ಹಾಗೂ ಮಗನನ್ನು ಅಪ್ಪಿಕೊಂಡು ಭಾವುಕರಾಗಿದ್ದರು.

ನೋಡಿರಿ

