ನಟ ದರ್ಶನ್ ಅರ್ಜಿ ವಿಚಾರಣೆ ಮುಂದೂಡಿಕೆ – ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ಜಾಮೀನು ಭವಿಷ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯಕ್ಕೆ ಜಾಮೀನು ಪಡೆದಿರುವ ನಟ ದರ್ಶನ್ ಸದ್ಯ ಥೈಲಾಂಡ್‌ನಲ್ಲಿ ಬಿಂದಾಸ್ ಆಗಿದ್ದಾರೆ.. ಶೂಟಿಂಗ್ ಜೊತೆ ಜೊತೆಗೆ ಪಾರ್ಟಿ ಮೂಡ್‌ನಲ್ಲಿದ್ದಾರೆ. ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಇಂದು ವಿಚಾರಣೆ ನಡೆಯಬೇಕಿತ್ತು. ಆದ್ರೀಗ ದರ್ಶನ್ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.
ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ.. ಎಲ್ಲೆಡೆ ಡೆಂಗ್ಯೂ ಡಂಗುರ – ಸ್ವಚ್ಛತೆ ಕಾಪಾಡದಿದ್ದರೆ ದಂಡ ಕಟ್ಟಲು ರೆಡಿಯಾಗಿ
ದರ್ಶನ್ ಸೇರಿದಂತೆ 7 ಆರೋಪಿಗಳಿಗೆ 2024ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ಗೆ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ. ರಾಜ್ಯ ಸರ್ಕಾರದ ಪರವಾಗಿ ವಕೀಲ ಸಿದ್ಧಾರ್ಥ್ ಲೂಥ್ರಾ ಅವರು ಜುಲೈ 17ರಂದು ವಾದ ಮಂಡಿಸಿದ್ದಾರೆ. ಇಂದು ಅರ್ಜಿ ವಿಚಾರಣೆಯ ತೀರ್ಪು ಎಂದು ಹೇಳಲಾಗಿತ್ತು. ಆದರೆ ದರ್ಶನ್ ಪರ ವಕೀಲರು ಗೈರಾದ ಕಾರಣ ವಿಚಾರಣೆಯನ್ನು ಜುಲೈ 24ಕ್ಕೆ ಮುಂದೂಡಲಾಗಿದೆ.
ಆದ್ರೆ ಕಪಿಲ್ ಸಿಬಲ್ ಕೇಸ್ ನಿನ್ನೆ ರಾತ್ರಿಯಷ್ಟೇ ಬಂದಿದೆ. ಹೀಗಾಗಿ ಒಂದು ದಿನ ಕಾಲಾವಕಾಶ ಕೊಡಿ ಅಂತ ಸಿದ್ದಾರ್ಥ್ ಧವೆ ಮನವಿ ಮಾಡಿದ್ದಾರೆ. ಹೀಗಾಗಿ ಸುಪ್ರೀಂ ಕೋರ್ಟ್ ಗುರುವಾರಕ್ಕೆ ವಿಚಾರಣೆಗೆ ಮುಂದೂಡಿದೆ. ಗುರುವಾರ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

ನೋಡಿರಿ

