ಅಮಾವಾಸ್ಯೆ ಅಂದ್ರೆ ಚೆನ್ನಾಗಿಲ್ಲ.. ಚಂದ್ರಯಾನ ಮಾಡ್ತಾರಂತೆ – ಸನಾತನ ಧರ್ಮವನ್ನ ಕಾಗೆಗಳಿಗೆ ಹೋಲಿಕೆ ಮಾಡಿದ ನಟ ಪ್ರಕಾಶ್ ರಾಜ್

ಅಮಾವಾಸ್ಯೆ ಅಂದ್ರೆ ಚೆನ್ನಾಗಿಲ್ಲ.. ಚಂದ್ರಯಾನ ಮಾಡ್ತಾರಂತೆ – ಸನಾತನ ಧರ್ಮವನ್ನ ಕಾಗೆಗಳಿಗೆ ಹೋಲಿಕೆ ಮಾಡಿದ ನಟ ಪ್ರಕಾಶ್ ರಾಜ್

ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ ಉದಯನಿಧಿ ಕಿಡಿ ಹೊತ್ತಿಸಿದ್ದರು. ಈ ವಿವಾದ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಸುವ ಮೂಲಕ ನಟ ಪ್ರಕಾಶ್ ರಾಜ್‌ (Prakash Raj) ಮತ್ತೆ ವಿವಾದವನ್ನ ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ.

ಇದನ್ನೂ ಓದಿ : ಸನಾತನ ಧರ್ಮ ವಿವಾದ – ‘ಆಡುವ ಮಾತಿನ ಮೇಲೆ ನಿಗಾ ಇರಲಿ’ ಎಂದು ಎಚ್ಚರಿಸಿದ ನಿರ್ಮಲಾನಂದನಾಥ ಸ್ವಾಮೀಜಿ

ಈಗಾಗಲೇ ಹಲವು ವಿವಾದಗಳ ಮೂಲಕ ಸುದ್ದಿಯಲ್ಲಿರುವ ನಟ ಪ್ರಕಾಶ್ ರಾಜ್ ಇದೀಗ ಸನಾತನ ಧರ್ಮದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಕಲಬುರಗಿ ನಗರದ ಪಂಡಿತ್ ರಂಗಮಂದಿರದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸನಾತನ ಧರ್ಮ ಅಂದ್ರೆ ಏನು ಅಂತಾ ಪ್ರಶ್ನಿಸಿದಾಗ, ಮನುಷ್ಯ ಬದಲಾಗುವುದಿಲ್ಲ ನಾನು ಎನ್ನುವುದು ಪ್ರಕೃತಿಗೆ ವಿರುದ್ಧ ನಾನೇ ಶ್ರೇಷ್ಠ ಅಂತಾನೆ. ಸದ್ಯ ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ, ನವಿಲು ಸಹ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ. ಈ ಮೂಲಕ ಸನಾತನ ಧರ್ಮದ ಬಗ್ಗೆ ಇವರು ದಾರಿ ತಪ್ಪಿಸಲು ತರುತ್ತಿದ್ದಾರೆ ಅಂತಾ ಹೇಳುವ ಮೂಲಕ ಸನಾತನ ಧರ್ಮದವರನ್ನು ಕಾಗೆಗಳಿಗೆ ಹೋಲಿಕೆ ಮಾಡಿದ್ದಾರೆ.

ಹಾಗೇ ಮಾತು ಮುಂದುವರಿಸಿ ಮಾತನಾಡಿದ ಪ್ರಕಾಶ್ ರಾಜ್, ಸನಾತನ ಧರ್ಮದ ಬಗ್ಗೆ ಮಾತನಾಡುವವರು ಯಾರೂ ಹಿಂದೂಗಳಲ್ಲ. ಇವರೆಲ್ಲಾ ರಾಜಕೀಯ ಲಾಭಕ್ಕಾಗಿ ದುರುದ್ದೇಶದಿಂದ ಮಾತನಾಡುತ್ತಿದ್ದಾರೆ. ಅಮಾವಾಸ್ಯೆ ಅಂದ್ರೆ ಚೆನ್ನಾಗಿಲ್ವಂತೆ, ಆದ್ರೆ ಚಂದ್ರಯಾನ ಮಾಡ್ತಾರಂತೆ, ಎಲ್ಲಾ ಧರ್ಮಗಳು ವಿಕಾರ ಇದೆ ಧರ್ಮಯುದ್ದ ಯಾವಾಗ ಮುಗಿಯುತ್ತೆ ಅನ್ನುವುದು ಗೊತ್ತಾಗಲ್ಲ. ಧರ್ಮ ಯುದ್ಧ ಕಾಡ್ಗಿಚ್ಚು ಇದ್ದಂತೆ. ಮೂಲನೂ ಗೊತ್ತಾಗಲ್ಲಾ ಅಂತ್ಯನೂ ಗೊತ್ತಾಗಲ್ಲ. ಹಿಂದೆ ರಾಜರ ಕಾಲದಲ್ಲಿ ರಾಜರ ಜೊತೆ ಕೆಲಸ ಮಾಡುವವರಿಗೆ ಕೆಲವೊಮ್ಮೆ ಸಂಬಳ ಕೊಡೋಕೆ ಆಗುತ್ತಿರಲಿಲ್ಲ. ಆಗ ಆ ಸೈನಿಕರು ಲೂಟಿ, ಅತ್ಯಾಚಾರ ಹಾಗೂ ದರೋಡೆ ಮಾಡಿಕೊಂಡು ಹೋಗುತ್ತಿದ್ದರು. ಇಂತಹವರನ್ನೇ ರಾಜಕಿಯದಲ್ಲೂ ಬಳಸಿಕೊಳ್ಳುತ್ತಿದ್ದಾರೆ ಎಂದರು.

suddiyaana