ವಾರಣಾಸಿ ಸಿನಿಮಾದಲ್ಲಿ ನಟ ಪ್ರಕಾಶ್ ರಾಜ್ – ಮಹೇಶ್ ಬಾಬು ತಂದೆಯ ಪಾತ್ರದಲ್ಲಿ ಸ್ಟಾರ್ ನಟ

ವಾರಣಾಸಿ ಸಿನಿಮಾದಲ್ಲಿ ನಟ ಪ್ರಕಾಶ್ ರಾಜ್ – ಮಹೇಶ್ ಬಾಬು ತಂದೆಯ ಪಾತ್ರದಲ್ಲಿ ಸ್ಟಾರ್ ನಟ

ಎಸ್.ಎಸ್. ರಾಜಮೌಳಿ ನಿರ್ದೇಶನದ ವಾರಣಾಸಿ ಚಿತ್ರದ ನಿರೀಕ್ಷೆ ಜಾಸ್ತಿಯಾಗುತ್ತಿದೆ. ಟಾಲಿವುಡ್‌ನ ಪ್ರಿನ್ಸ್ ಮಹೇಶ್ ಬಾಬು ಮತ್ತು ಮಲಯಾಳಂ ಹೀರೋ ಪ್ರಥ್ವಿರಾಜ್ ಸುಕುಮಾರನ್, ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ಈ ಚಿತ್ರಕ್ಕೆ ಕನ್ನಡದ ನಟರೊಬ್ಬರು ಸೇರ್ಪಡೆಯಾಗಿದ್ದಾರೆ. ಮಹೇಶ್ ಬಾಬು ತಂದೆಯಾಗಿ ಪ್ರಕಾಶ್ ರಾಜ್ ನಟಿಸುತ್ತಿದ್ದಾರೆ.

ಇದನ್ನೂ ಓದಿ:ವಿಜಯ್-ರಶ್ಮಿಕಾ ಮದುವೆ ಬರುವ ಅತಿಥಿಗಳಿಗೆ ಮೊಬೈಲ್ ನಿಷೇಧ – ಫೋಟೋ ಲೀಕ್ ಮಾಡುವಂಗಿಲ್ಲ

ಎಸ್.ಎಸ್. ರಾಜಮೌಳಿ ಅವರ ಬಹುನಿರೀಕ್ಷಿತ ಸಿನಿಮಾ ವಾರಣಾಸಿ ಮತ್ತೊಂದು ಅಪ್‌ಡೇಟ್ ಸಿಕ್ಕಿದೆ. ಈ ಚಿತ್ರದಲ್ಲಿ ಬಹುಮುಖ ನಟ ಪ್ರಕಾಶ್ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಶಿವಭಕ್ತನಾಗಿ ಕಾಣಿಸಿಕೊಳ್ಳಲಿದ್ದಾರೆ ಹೇಳಿದ್ದಾರೆ . ಇದಲ್ಲದೆ, ಈ ಚಿತ್ರದಲ್ಲಿ ಮಹೇಶ್ ಬಾಬು ಅವರ ತಂದೆಯಾಗಿ ಪ್ರಕಾಶ್ ರಾಜ್ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಪಾತ್ರ ಬಹಳ ಮುಖ್ಯವಾಗಿದೆಯಂತೆ. ಅವರ ಪಾತ್ರದಿಂದಾಗಿ ಚಿತ್ರವು ಒಂದು ತಿರುವು ಪಡೆದುಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ.

ವಾರಣಾಸಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ರಾಜಮೌಳಿ ಈ ಚಿತ್ರವನ್ನು 2027 ರಲ್ಲಿ ರಿಲೀಸ್ ಮಾಡಲಿದ್ದಾರೆ. ಈ ಚಿತ್ರವನ್ನು 120 ದೇಶಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ರುದ್ರನಾಗಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಕುಂಭನ ಪಾತ್ರದಲ್ಲಿ ಮತ್ತು ಪ್ರಿಯಾಂಕಾ ಚೋಪ್ರಾ ಮಂದಾಕಿನಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ನಟ ಪ್ರಕಾಶ್ ರಾಜ್ ಶಿವಭಕ್ತನಾಗಿ ಕಾಣಿಸಿಕೊಳ್ಳಲಿದ್ದಾರೆ.

Sulekha

Leave a Reply

Your email address will not be published. Required fields are marked *