ಸೇನೆಗೆ ಅವಮಾನ – ಕ್ಷಮೆಯಾಚಿಸಿದ ಬಾಲಿವುಡ್ ನಟಿ
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ದವಾಗಿದೆ ಎಂಬ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ವಿಚಾರವಾಗಿ ಸೇನೆಯನ್ನು ಅವಮಾನಿಸುವ ರೀತಿಯಲ್ಲಿ ಬಾಲಿವುಡ್ ನಟಿ ರಿಚಾ ಚಡ್ಡಾ ಟ್ವೀಟ್ ಮಾಡಿದ್ದದ್ದರು. ಇದು ಟೀಕೆಗೆ ಗುರಿಯಾಗುತ್ತಿದ್ದಂತೆ ತಮ್ಮ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಕ್ಷಮೆಯಾಚಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಸಿದ್ದ ರಿಚಾ, ‘ ಗಲ್ವಾನ್ ಹಾಯ್ ಎನ್ನುತ್ತಿದೆ’ ಅಂದು ಟ್ವೀಟ್ ಮಾಡಿದ್ದರು. ಇದನ್ನು ಕಂಡ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ರಿಚಾ ಈ ಟ್ವೀಟ್ ಅನ್ನು ಡಿಲೀಟ್ ಮಾಡಿ, ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಇದನ್ನೂ ಓದಿ: ಗುಜರಾತ್ ಚುನಾವಣೆ, ಮುಂದಿನ 25 ವರ್ಷದ ಭವಿಷ್ಯ ನಿರ್ಧರಿಸಲಿದೆ: ಪ್ರಧಾನಿ ಮೋದಿ
“ಉದ್ದೇಶಪೂರ್ವಕವಾಗಿ ನಾನು ಈ ಟ್ವೀಟ್ ಮಾಡಿಲ್ಲ. ನನ್ನ ಟ್ವೀಟ್ ನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಸೇನೆಯಲ್ಲಿರುವ ನನ್ನ ಸಹೋದರರ ಕುರಿತು ನನಗೆ ತುಂಬಾ ಗೌರವವಿದೆ. ನನ್ನ ತಾತ ಕೂಡ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಮಾವ ಕೂಡ ಸೇನೆಯ ಭಾಗವಾಗಿದ್ದರು. ಹೀಗಾಗಿ ಸೇನೆಯಲ್ಲಿ ನನ್ನ ರಕ್ತ ಸಂಬಂಧಿಕರಿದ್ದಾರೆ. ಅವರನ್ನು ನೋಯಿಸುವ ಯಾವ ಉದ್ದೇಶವೂ ಇರಲಿಲ್ಲ ಎಂದು ಟ್ವೀಟ್ ಮೂಲಕವೇ ಕ್ಷಮೆಯಾಚಿಸಿದ್ದಾರೆ
@BediSaveena pic.twitter.com/EYHeS75AjS
— RichaChadha (@RichaChadha) November 24, 2022
ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆಯನ್ನು (ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ) ಇಟ್ಟುಕೊಂಡು ಗಲ್ವಾನ್ ಹಾಯ್ ಎನ್ನುತ್ತಿದೆ” ಎಂದು ಬರೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ನೆಟ್ಟಿಗರು, ಇಂತಹ ಹೇಳಿಕೆಯನ್ನು ಹೇಳಲು ನಾಚಿಕೆಯಾಗಬೇಕು ಎಂದು ಪ್ರತಿಕ್ರಿಯಿಸಿದ್ದರು. ಅಲ್ಲದೇ ಬಿಜೆಪಿ ನಾಯಕರು ಪ್ರತಿಕ್ರಿಯಿಸಿ ಇದೊಂದು ಅವಮಾನಕಾರಿ ಪೋಸ್ಟ್ ಎಂದು ಕಿಡಿಕಾರಿದ್ದರು. ಇದರ ಬೆನ್ನಲ್ಲೇ ಪೋಸ್ಟ ಡಿಲೀಟ್ ಮಾಡಿ, ಬಳಿಕ ಕ್ಷಮೆಯಾಚಿಸಿದ್ದಾರೆ.