ನಟ ಶರತ್‌ಬಾಬು ಆರೋಗ್ಯ ಸ್ಥಿತಿ ಗಂಭೀರ – ಚೇತರಿಕೆಗಾಗಿ ಅಭಿಮಾನಿಗಳ ಪ್ರಾರ್ಥನೆ

ನಟ ಶರತ್‌ಬಾಬು ಆರೋಗ್ಯ ಸ್ಥಿತಿ ಗಂಭೀರ – ಚೇತರಿಕೆಗಾಗಿ ಅಭಿಮಾನಿಗಳ ಪ್ರಾರ್ಥನೆ

ಬಹುಭಾಷಾ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಭಾರತದಲ್ಲಿ ಸಾಕಷ್ಟು ಹೆಸರು ಗಳಿಸಿರುವ ಶರತ್ ಬಾಬು ಅವರು, ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಶರತ್ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ಬಹು ಅಂಗಾಂಗ ಹಾನಿಯಿಂದ ಶರತ್ ಬಾಬು ಅವರು ಬಳಲುತ್ತಿದ್ದಾರೆ.

ಇದನ್ನೂ ಓದಿ:  ‘ಸಂಪತ್ ಸಾವಿನ ಬಗ್ಗೆ ಗಾಳಿ ಸುದ್ದಿ ಬೇಡ’ – ಗೆಳೆಯನ ಸಾವಿನ ರಹಸ್ಯ ಬಿಚ್ಚಿಟ್ಟ ನಟ ರಾಜೇಶ್ ಧ್ರುವ

ಕನ್ನಡದ ಅಮೃತವರ್ಷಿಣಿ ಸೇರಿದಂತೆ ದಕ್ಷಿಣದ ನಾನಾ ಭಾಷೆಗಳ ಸಾಕಷ್ಟು ಸಿನಿಮಾಗಳಲ್ಲಿ ಶರತ್‌ಬಾಬು ನಟಿಸಿದ್ದಾರೆ. ಶರತ್ ಬಾಬು ಅವರ ಕಿಡ್ನಿ, ಲಿವರ್, ಲಂಗ್ಸ್ ಸೇರಿದಂತೆ ಮತ್ತಿತರ ಅಂಗಾಂಗ ತೊಂದರೆಯಿಂದ ಬಳಲುತ್ತಿದ್ದಾರೆ. ಸದ್ಯ ಶರತ್‌ಬಾಬು ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಿದ ನಂತರ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು, ಅಲ್ಲದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಮಾಹಿತಿಯೂ ಇತ್ತು. ಆದರೆ, ಮತ್ತೆ ಪರಿಸ್ಥಿತಿ ಗಂಭೀರವಾಗಿದ್ದು, ನಟನ ಸ್ಥಿತಿ ಚಿಂತಾಜನಕವಾಗಿದೆ. ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು.

suddiyaana