ಟಾಕ್ಸಿಕ್ ರಿಲೀಸ್ಗೆ ಕ್ಷಣಗಣನೆ – ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಯಶ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ನಾಳೆ (ಆ.26)ಕ್ಕೆ ರಿಲೀಸ್ ಆಗಲಿದೆ. ನಟ ಯಶ್ ಸಿನಿಮಾ ಬಿಡುಗೆಡೆಗೂ ಮುನ್ನ ಧರ್ಮಸ್ಥಳಕ್ಕೆ ಆಗಮಿಸಿದರು. ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಇದನ್ನೂ ಓದಿ:ಟಾಕ್ಸಿಕ್ಗೆ ಒಲಿದ ವರ‘ಲಕ್ಷ್ಮಿ’ – ಬುಕಿಂಗ್ನಲ್ಲೇ ಕೋಟಿ ಕೋಟಿ ಕಮಾಯಿ
ಟಾಕ್ಸಿಕ್.. ಸ್ಯಾಂಡಲ್ವುಡ್ನಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿರುವ ಸಿನಿಮಾ. ಆಗಸ್ಟ್ 26ರಂದು ಟಾಕ್ಸಿಕ್ ಸಿನಿಮಾ ಜಗತ್ತಿನಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಸಿನಿಮಾ ಬಿಡುಗಡೆಯ ಹಿಂದಿನ ದಿನ ಅಂದರೆ ಮಂಗಳವಾರ ನಟ ಯಶ್ ಅವರು ಧರ್ಮಸ್ಥಳಕ್ಕೆ ಆಗಮಿಸಿದರು. ತಮಿಳುನಾಡಿನ ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ ಯಶ್, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಾಣಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು.
ರಾಕಿಂಗ್ ಸ್ಟಾರ್ ಯಶ್ ತಮ್ಮ ಪ್ರತಿಯೊಂದು ಸಿನಿಮಾ ಬಿಡುಗಡೆಯಾಗುವ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತಾರೆ. ಯಶ್ ಈ ಸಂಪ್ರದಾಯವನ್ನು ಆಚರಿಸಿಕೊಂಡು ಬಂದಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಮುಂದುವರಿಸಿರುವ ಯಶ್, ‘ಟಾಕ್ಸಿಕ್’ ರಿಲೀಸ್ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನೋಡಿರಿ


One thought on “ಟಾಕ್ಸಿಕ್ ರಿಲೀಸ್ಗೆ ಕ್ಷಣಗಣನೆ – ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಟ ಯಶ್”
Comments are closed.