ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್‌ – ನಟಿ ರಾಧಿಕಾ ಕುಮಾರಸ್ವಾಮಿ ಕೋಟಿ ಕೋಟಿ ಹಣಕಾಸು ವ್ಯವಹಾರ ರಿವೀಲ್!

ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್‌ – ನಟಿ ರಾಧಿಕಾ ಕುಮಾರಸ್ವಾಮಿ ಕೋಟಿ ಕೋಟಿ ಹಣಕಾಸು ವ್ಯವಹಾರ ರಿವೀಲ್!

ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಜಮೀರ್ ಅಹಮದ್ ಖಾನ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ 2019 ರಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿಗೆ ಕಾನೂನು ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ:‌ ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಆರಂಭಕ್ಕೆ ಮುಹೂರ್ತ ಫಿಕ್ಸ್!‌ – ಡೇಟ್‌ ಅನೌನ್ಸ್‌ ಮಾಡಿದ ಕಿಚ್ಚ ಸುದೀಪ್!

2019ರಲ್ಲಿ ಐ ಮಾನಿಟರಿ ಅಡ್ವೈಸರಿ ಕಂಪನಿಯ ಬಹುಕೋಟಿ ವಂಚನೆ ಹಗರಣ ಬೆಳಕಿಗೆ ಬಂದಿತ್ತು. ಈ ವಂಚಕ ಕಂಪನಿ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಜಮೀರ್‌ ಖಾನ್‌ ಅವರ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿತ್ತು. ಇಡಿ ವರದಿಯ ಅನ್ವಯ ಆಗ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಜಮೀರ್ ಖಾನ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಅಂದು ಅಸ್ತಿತ್ವದಲ್ಲಿದ್ದ ಭ್ರಷ್ಟಾಚಾರ ನಿಗ್ರಹ ದಳವು (ಎಸಿಬಿ) ಪ್ರಕರಣ ದಾಖಲಿಸಿತ್ತು. ಎಸಿಬಿ ರದ್ದಾದ ಬಳಿಕ ಈ ಪ್ರಕರಣ ತನಿಖೆಯೂ ಲೋಕಾಯುಕ್ತ ಪೊಲೀಸರಿಗೆ ವರ್ಗವಾಗಿತ್ತು. ಈಗ ಸಚಿವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಯಾರ ಬಳಿ ಸಾಲ ಪಡೆದಿದ್ದಾರೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಇದೀಗ ನಟಿ ರಾಧಿಕಾ ಕುಮಾರಸ್ವಾಮಿ 2.5 ಕೋಟಿ ಸಾಲ ಕೊಟ್ಟಿರುವ ವಿಚಾರ ಬಹಿರಂಗಗೊಂಡಿದೆ. ಈ ಸಂಬಂಧ ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ.

ಜಮೀರ್‌ ಅಹ್ಮದ್‌ಗೆ 2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ. ನಾನು 2012ರಲ್ಲಿ ಶಮಿಕಾ ಎಂಟರ್‌ಪ್ರೈಸಸ್‌ ಹೆಸರಿನಲ್ಲಿ ಯಶ್ ಹಾಗೂ ರಮ್ಯಾ ಅಭಿನಯದ ಲಕ್ಕಿ ಸಿನಿಮಾ ನಿರ್ಮಾಣ ಮಾಡಿದ್ದೆ. ಮನರಂಜನಾ ಚಾನೆಲ್‌ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ವಿನಿಂದ ಸಂಪಾದಿಸಿದ ಹಣದಲ್ಲಿ ಆರ್ಥಿಕ ಸಂಕಷ್ಟದಲ್ಲಿದ್ದ ಜಮೀರ್‌ ಅಹ್ಮದ್‌ ಅವರಿಗೆ 2.5 ಕೋಟಿ ರೂಗಳನ್ನು ಸಾಲವಾಗಿ ನೀಡಿದ್ದೆ ಎಂದು ವಿಚಾರಣೆ ವೇಳೆ ಹೇಳಿದ್ದಾರೆ ಎಂದು ವರದಿಯಾಗಿದೆ.

Shwetha M