ದರ್ಶನ್‌ ಫ್ಯಾನ್ಸ್ ವಿರುದ್ಧ ಮತ್ತೆ ಸಿಡಿದೆದ್ದ ನಟಿ ರಮ್ಯಾ – ಫ್ಯಾನ್ಸ್‌ ಮೆಸೇಜ್‌ಗೂ, ಸ್ವಾಮಿ ಮೆಸೇಜ್‌ಗೂ ವ್ಯತ್ಯಾಸವಿಲ್ಲ ಎಂದ ಮೋಹಕತಾರೆ

ದರ್ಶನ್‌ ಫ್ಯಾನ್ಸ್ ವಿರುದ್ಧ ಮತ್ತೆ ಸಿಡಿದೆದ್ದ ನಟಿ ರಮ್ಯಾ – ಫ್ಯಾನ್ಸ್‌ ಮೆಸೇಜ್‌ಗೂ, ಸ್ವಾಮಿ ಮೆಸೇಜ್‌ಗೂ ವ್ಯತ್ಯಾಸವಿಲ್ಲ ಎಂದ ಮೋಹಕತಾರೆ

ನಟಿ ರಮ್ಯಾ ಹಾಗೂ ದರ್ಶನ್‌ ಫ್ಯಾನ್ಸ್‌ ನಡುವಿನ ವಾರ್‌ ದಿನೇ ದಿನೇ ಹೆಚ್ಚಾಗ್ತಿದೆ.  ನಟಿ ರಮ್ಯಾ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತಿದಕ್ಕೆ ದರ್ಶನ್‌ ಫ್ಯಾನ್ಸ್‌ ಸಿಟ್ಟಾಗಿದ್ದಾರೆ. ಇದೀಗ ನಟಿಗೆ ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಹಾಕ್ತಿದ್ದಾರೆ. ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಳುಹಿಸುತ್ತಿರುವ ಅಶ್ಲೀಲ ಮೆಸೇಜ್‌ಗಳನ್ನು ರಮ್ಯಾ ತಮ್ಮದೇ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: ಭರ್ಜರಿ ಬ್ಯಾಚುಲರ್ 2 ವಿನ್ನರ್ ಸುನೀಲ್​ ಅಮ್ರಿಟಾ – ಗೆದ್ದವರಿಗೆ ಸಿಕ್ಕ ಹಣವೆಷ್ಟು?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ನಟಿ ರಮ್ಯಾ  ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ನಟಿ ಪೋಸ್ಟ್ ಮಾಡಿದ್ದರು. ಇದು ದರ್ಶನ್‌ ಫ್ಯಾನ್ಸ್‌ ಕೋಪಕ್ಕೆ ಕಾರಣವಾಗಿದೆ. ಇದೀಗ ನಟಿ ರಮ್ಯಾಗೆ ಅಶ್ಲೀಲ ಮೆಸೆಜ್‌ಗಳನ್ನ ದರ್ಶನ್‌ ಫ್ಯಾನ್ಸ್‌ ಹಾಕ್ತಿದ್ದಾರೆ. ಆ ಎಲ್ಲಾ ಸ್ಕ್ರೀನ್‌ಶಾಟ್ ಅನ್ನು ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದರ್ಶನ್‌ ಫ್ಯಾನ್ಸ್‌ ಮಾಡಿರುವ ಕೆಟ್ಟ ಮೆಸೆಜ್‌ಗಳನ್ನ ರಮ್ಯಾ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಹಾಗೂ ಡಿಬಾಸ್ ಫ್ಯಾನ್ಸ್ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀದ್ವೇಷ ಮನೋಭಾವದವರು. ಇಂಥವರಿಂದಲೇ ಹೆಣ್ಣು ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಅಂತ ಡಿ ಬಾಸ್ ಫ್ಯಾನ್ಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ ರಮ್ಯಾ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್‌ಗಳು ಸಾಕ್ಷಿ. ನಿಮ್ಮ ಮಸೇಜ್‌ಗಳಿಂದ ನಿಮ್ಮ ಯೋಗ್ಯತೆ ಇಷ್ಟರಲ್ಲೇ ಗೊತ್ತಾಗುತ್ತೆ ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ. ಅಷ್ಟೇ ಅಲ್ಲ ಕೆಟ್ಟ ಮೆಸೆಜ್‌ ಹಾಕಿದವರ ವಿರುದ್ಧ ಕಾನೂನು ಹೋರಾಟ ಮಾಡೋದಾಗಿ ತಿಳಿಸಿದ್ದಾರೆ. ಸುದೀಪ್, ಯಶ್ ಅಲ್ಲ, ಅವರ ಹೆಂಡತಿ ಮಕ್ಕಳನ್ನೂ ಬಿಟ್ಟಿಲ್ಲ. ಚಿಕ್ಕಚಿಕ್ಕ ಮಕ್ಕಳ ಬಗ್ಗೆ ಕೆಟ್ಟಕೆಟ್ಟ ಪದ ಬಳಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Shwetha M