ಅಮೃತಧಾರೆ ಮಾನ್ಯ ಪುತ್ರನಿಗೆ ಕ್ಯಾನ್ಸರ್ – ಶಾಕಿಂಗ್ ವಿಚಾರ ಹೇಳಿದ ನಟಿ ಶಾಂಭವಿ
ಅಮೃತಧಾರೆ ಸೀರಿಯಲ್ ರೋಚಕ ತಿರುವು ಪಡೆದುಕೊಂಡಿದೆ. ಗೌತಮ್ ದಿವಾನ್ ಮಾಜಿ ಪ್ರೇಯಸಿ ಮಾನ್ಯ ಪಾತ್ರದಲ್ಲಿ ನಟಿ ಶಾಂಭವಿ ನಟಿಸಿದ್ರು.. ಇದೀಗ ಶಾಂಭವಿ ಶಾಕಿಂಗ್ ವಿಚಾರವೊಂದನ್ನ ತಿಳಿಸಿದ್ದಾರೆ.. ತನ್ನ ಮಗ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರೆಬೆಲೆ ಸ್ಟಾರ್ ಅಂಬರೀಷ್ ಮನೆಗೆ ಜ್ಯೂನಿಯರ್ ಅಂಬರೀಷ್ ಎಂಟ್ರಿ – ಗಂಡು ಮಗುವೆ ಜನ್ಮ ನೀಡಿದ ಅವಿವಾ ಬಿದ್ದಪ್ಪ
ನಟಿ ಶಾಂಭವಿ ನಿಮ್ಗೆಲ್ಲರಿಗೂ ಗೊತ್ತೇ ಇದೆ.. ಇತ್ತೀಚೆಗೆ ಅಮೃತಧಾರೆ ಸೀರಿಯಲ್ ನಲ್ಲಿ ನಟಿಸಿದ್ರು. ಅಮೃತಧಾರೆಯಲ್ಲಿ ಗೌತಮ್ ದಿವಾನ್ ರನ್ನು ಲವ್ ಮಾಡುವ ಮಾನ್ಯ ಪಾತ್ರದ ಮೂಲಕ ಕಾಣಿಸಿಕೊಂಡಿದ್ದರು. ಸೀರಿಯಲ್ ನಲ್ಲಿ ಆ ಪಾತ್ರವನ್ನು ಈಗಾಗಲೇ ಎಂಡ್ ಮಾಡಲಾಗಿದೆ. ಸದ್ಯ ಗಂಡ ಹಾಗೂ ಇಬ್ಬರು ಅವಳಿ ಮಕ್ಕಳ ಜೊತೆಗೆ ಮುದ್ದಾದ ಸಂಸಾರ ಸಾಗಿಸುತ್ತಾ ಬಂದಿದ್ರು.. ಆದ್ರೀಗ ಶಾಂಭವಿ ಅವರ ಜೀವನದಲ್ಲಿ ಭಾರಿ ದೊಡ್ಡ ಆಘಾತ ಎದುರಾಗಿದೆ. ನಟಿ ಶಾಂಭವಿ ಮಗ ದುಷ್ಯಂತ್ ಗೆ ಮಾರಣಾಂತಿಕ ಕಾಯಿಲೆ ಬಂದಿರುವ ಬಗ್ಗೆ ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಭಾವುಕ ಪೋಸ್ಟ್ ಹಂಚಿಕೊಂಡಿರುವ ನಟಿ ಶಾಂಭವಿ ‘ಕನಸು ಮನಸಿನಲ್ಲೂ ನೆನೆಸದ ವಿಷಯ ನಡೆದುಹೋಗಿದೆ. ಸೆಪ್ಟೆಂಬರ್ 23ರಂದು 3 ವರುಷದ ಪುಟಾಣಿ ಕಂದ ದುಷ್ಯುಗೆ “3rd ಸ್ಟೇಜ್ ಬ್ಲಡ್ ಕ್ಯಾನ್ಸರ್” (3rd stage blood cancer) ಇರೋದು ಪತ್ತೆ ಆಯ್ತು. 5-6 ದಿನಗಳಲ್ಲಿ ನಡೆದ ಟೆಸ್ಟ್ ರಿಸಲ್ಟ್ಸ್ ಬರೋ ವರೆಗೆ ಪ್ರತಿ ಕ್ಷಣವೂ “ಇದು ಕ್ಯಾನ್ಸರ್ ಆಗಿರದೆ ಇರಲಿ” ಅಂತಾ ಪ್ರಾರ್ಥಿಸ್ತಾ ಇದ್ವಿ. ಹಣೆಯಲಿ ಬರೆದಿರೋದನ್ನ ಬಲಿಸೋಕೆ ಆಗದಿದ್ದಾಗ ಈ ಪೂಜೆ, ಪ್ರಾರ್ಥನೆ, ಹರೆಗಳೆಲ್ಲ ಯಾಕೆ ಅನ್ಸತ್ತೆ!!! ಎನಗತ್ತೋ ಆಗ್ಲಿ ಅಂತ ರೆಡಿ ಆಗಿ ನಿಂತಿದೀವಿ ಇವಾಗ. ಬೇರೆ ಆಪ್ಷನ್ ಆದ್ರೂ ಏನಿದೆ?? ಇದು 95% ಕ್ಯೂರೇಬಲ್ ಅಂತಾ ಡಾಕ್ಟರ್ ಭರವಸೆ ಕೊಟ್ಟಿದ್ದಾರೆ. ಆದ್ರೆ ಪಾಪಾ ದುಷ್ಯೂಗೆ ತನ್ನ ಜೊತೆ ಏನಾಗ್ತಾ ಇದೆ? ಯಾಕ್ ಆಗ್ತಾ ಇದೆ ಅನ್ನೋ ಅರಿವೇ ಇಲ್ಲ. ಎಷ್ಟೆಲ್ಲ ನೋವು ಅನುಭವಿಸಬೇಕಲ್ಲ ಈ ಕಂದ ಅನ್ನೋದೇ ಸಂಕಟ.
“ನಿನಗ ಹುಷಾರಿಲ್ಲ ಮಗನೇ, ತುಂಬಾ ದೊಡ್ಡ ಟ್ರೀಟ್ಮೆಂಟ್ ತಗೋಬೇಕಿದೆ” ಅಂತಾ ಅರ್ಥ ಮಾಡಿಸೋಕೆ ಪ್ರಯತ್ನ ಪಡ್ತಾ ಇರ್ತೀನಿ. ಕೀಮೋಥೆರಪಿಯ ಮೊದಲ ಹಂತ ಮುಗಿದು ಎರಡನೇ ಹಂತ ಶುರುವಾಗಿದೆ. ಸುಮಾರು 40 ದಿನಗಳ ಹಿಂದೆ ಥೆರಪಿಯ ಮೊದಲ ದಿನದಂದು ಕ್ಲಿಕ್ಕಿಸಿದ ಶಾಟ್ಸ್ ಇದು ಎಂದು ಮಗನ ಜೊತೆಗಿನ ಫೋಟೊ ಹಾಗೂ ವಿಡಿಯೋ ಶೇರ್ ಮಾಡಿದ್ದಾರೆ.