ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕಾಗಿ ಕೋರಿ ಅರ್ಜಿ ಸಲ್ಲಿಕೆ

ಕನ್ನಡದ ಖ್ಯಾತ ನಟಿ, ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಉದ್ಯಮಿ ಸುಮಂತ್ ಜೊತೆಗೆ ನಾಲ್ಕು ವರ್ಷ ದಾಂಪತ್ಯ ಜೀವನ ಕಳೆದ ಶುಭಾ ಪೂಂಜಾ ಡೈವೋರ್ಸ್ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ:ತೆರೆ ಮೇಲೆ ಪೆದ್ದಿ ಪವರ್ – ರಾಮ್ಚರಣ್, ಶಿವಣ್ಣ ಜೋಡಿಗೆ ಅಭಿಮಾನಿಗಳ ಬಹುಪರಾಕ್
ನಟಿ ಶುಭಾ ಪೂಂಜಾ ಮತ್ತು ಪತಿ ಸುಮಂತ್ ಬಿಲ್ಲವ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುತ್ತಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಶುಭಾ ಪೂಂಜಾ ಮತ್ತು ಉದ್ಯಮಿ ಸುಮಂತ್ ಬಿಲ್ಲವ ಅವರು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ರಿಯಾಲಿಟಿ ಶೋಗಳ ಸ್ಟೇಜ್ನಲ್ಲೂ ಕಾಣಿಸಿಕೊಂಡಿದ್ದರು. ಈಗ ಏಕಾಏಕಿ ಬೇರೆ ಆಗಲು ಮುಂದಾಗಿದ್ದು ಯಾಕೆ ಅನ್ನೋ ವಿಚಾರ ಇನ್ನೂ ಬಹಿರಂಗವಾಗಿಲ್ಲ. ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್ಗೆ ಹಾಜರಾಗುವ ಸಾಧ್ಯತೆ ಇದೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ. ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ಶುಭಾ ಪೂಂಜಾ ಕನ್ನಡಿಗರ ಗಮನ ಸೆಳೆದಿದ್ದರು.

ನೋಡಿರಿ

