ಚೀನಾದ ಮತ್ತೊಂದು ಕುತಂತ್ರ ಬಯಲು – ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ ಮಾಡಿದ ಡ್ರ್ಯಾಗನ್‌ ಸರ್ಕಾರ!

ಚೀನಾದ ಮತ್ತೊಂದು ಕುತಂತ್ರ ಬಯಲು – ಅರುಣಾಚಲ ಪ್ರದೇಶ ಸೇರಿಸಿ ನಕ್ಷೆ ಬಿಡುಗಡೆ ಮಾಡಿದ ಡ್ರ್ಯಾಗನ್‌ ಸರ್ಕಾರ!

ಸ್ವಲ್ಪ ಕಾಲ ಸೈಲೆಂಟ್ ಆಗಿ ಕುಳಿತಿದ್ದ ಚೀನಾ, ಮತ್ತೆ ತನ್ನ ನರಿಬುದ್ದಿ ತೋರಿಸಲು ಶುರುಮಾಡಿದೆ. ಅರುಣಾಚಲ ಪ್ರದೇಶ ತನಗೆ ಸೇರಿದ್ದು ಅನ್ನೋದನ್ನ ಮತ್ತೊಮ್ಮೆ ಪ್ರತಿಪಾದಿಸೋ ನಿಟ್ಟಿನಲ್ಲಿ ಮತ್ತೆ ವಿವಾದಾತ್ಮಕ ಪ್ರದೇಶವಾಗಿರುವ ಅರುಣಾಚಲ ಪ್ರದೇಶದ ಅಕ್ಸಾಯ್ ಚಿನ್ ತನ್ನ ಭೂಭಾಗ ಎಂದು ಹೇಳಿಕೊಂಡಿದೆ.

ಅರುಣಾಚಲ ಪ್ರದೇಶ ತನ್ನದೆಂದು ಪ್ರತಿಪಾದಿಸುತ್ತಾ ಬಂದಿರೋ ಚೀನಾ ಕೆಲವು ತಿಂಗಳ ಹಿಂದೆ ಅರುಣಾಚಲ ಪ್ರದೇಶದ ಸುಮಾರು 11 ಊರುಗಳ ಹೆಸರುಗಳನ್ನು ಬದಲಾಯಿಸಿತ್ತು. ಅಷ್ಟೇ ಅಲ್ಲದೇ ಅರಣಾಚಲ ಪ್ರದೇಶವನ್ನು ದಕ್ಷಿಣ ಭಾಗ – ಝಂಗಾನ್ ಅಂತಾ ಡ್ರ್ಯಾಗನ್ ಸರ್ಕಾರ ಹೇಳಿಕೊಳ್ಳುತ್ತಾ ಬಂದಿದೆ. ಇದೀಗ ಚೀನಾ ಅಧ್ಯಕ್ಷ ಪಿ ಜಿನ್‌ಪಿಂಗ್‌ ನಿರ್ದೇಶನದಂತೆ ನೈಸರ್ಗಿಕ ಸಂಪನ್ಮೂಲ ಸಚಿವಾಲಯವು 2023ರ ಆವೃತ್ತಿಯ ಅಧಿಕೃತ ನಕ್ಷೆಯನ್ನು ಬಿಡುಗಡೆ ಮಾಡಿದೆ. ಹೊಸ ನಕ್ಷೆಯಲ್ಲಿ ಅರುಣಾಚಲ ಪ್ರದೇಶದ ಅಕ್ಸಾಯ್ ಚಿನ್, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಪ್ರದೇಶ ಒಳಗೊಂಡಿದೆ.

ಇದನ್ನೂ ಓದಿ: ಹಸೆಮಣೆ ಏರಬೇಕಿದ್ದವರು ಮಸಣ ಸೇರಿದರು – ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿ ಯುವಜೋಡಿ ಸಾವು

ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಸಂಘರ್ಷ ನಡೆದ ನಂತರ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಸಂಪೂರ್ಣ ಹದೆಗೆಟ್ಟಿದೆ. ಇದನ್ನು ಸರಿಪಡಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ ಪಿಂಗ್ ಅವರು ದಕ್ಷಿಣ ಆಫ್ರಿಕಾದ ಜೊಹಾನೆಸ್‌ಬರ್ಗ್‌ನಲ್ಲಿ ನಡೆದ ಜಿ-20 ಬ್ರಿಕ್ಸ್‌ ಶೃಂಗಸಭೆಯಲ್ಲಿ ಮಾತುಕತೆ ನಡೆಸಿದ್ದರು. ಗಡಿಯಲ್ಲಿ ಉದ್ವಿಗ್ನತೆ ಶಮನ ಮತ್ತು ಸೇನಾಪಡೆಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಚೀನಾ ಸರ್ಕಾರ ಭಾರತದ ಭೂ ಪ್ರದೇಶಗಳನ್ನು ಸೇರಿಸಿ ನಕ್ಷೆ ಬಿಡುಗಡೆ ಮಾಡುವ ಮೂಲಕ ಮತ್ತೆ ಭಾರತದ ಕೆಂಗಣ್ಣಿಗೆ ಗುರಿಯಾಗಿದೆ.

suddiyaana