ಕೇಂದ್ರ ಸಚಿವ ಹೆಚ್‌ಡಿಕೆ, ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್‌ಐಆರ್ ದಾಖಲು – ಏನಿದು ಹೊಸ ಕೇಸ್?
ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದೆ.. ಈ ಹೊತ್ತಲ್ಲೇ ಇದೀಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾನೂನು ಸಂಕಷ್ಟ ಎದುರಾಗಿದೆ.. ಹೆಚ್‌ಡಿಕೆ ಹಾಗೂ ನಿಖಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇದನ್ನೂ ಓದಿ: ‘ಕೈ’ ಗ್ಯಾರಂಟಿ ಕಾಪಿ ಪೇಸ್ಟ್ – ಗೆದ್ರೆ 2100 ರೂ.. ಫ್ರೀ LPG..
ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್‌ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು.
ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್‌ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು.
ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್‌ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದರು. ಈ ವಿಚಾರವಾಗಿ ಎಡಿಜಿಪಿ ಕೋರ್ಟ್‌ನ ಮೊರೆ ಹೋಗಿದ್ದರು. ಕೋರ್ಟ್ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲಾಗಿದೆ.