ಮುಸ್ಮಿಂ ಯುವಕನ ಜೊತೆ ಮಗಳ ಮದುವೆ – ಪೊಲೀಸ್ ಠಾಣೆಯಲ್ಲಿ ಪೋಷಕರ ಗೋಳಾಟ

ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರೀತಿಸಿದ ಯುವಕನೊಂದಿಗೆ ತೆರಳಿದ ಮಗಳಿಗಾಗಿ ಪೋಷಕರು ಕಣ್ಣೀರು ಹಾಕಿದ್ದಾರೆ. ಮಗಳು ತಾನು ಮದುವೆಯಾಗಿದ್ದು, ಪೋಷಕರೊಂದಿಗೆ ಹಿಂತಿರುಗಲು ನಿರಾಕರಿಸಿ, ತನ್ನ ಪತಿಯೊಂದಿಗೇ ತೆರಳಿದ್ದಾಳೆ. ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಅದೇ ಠಾಣೆಗೆ ಸ್ವಯಂಪ್ರೇರಿತವಾಗಿ ಪ್ರಿಯಕರನೊಂದಿಗೆ ಬಂದ ಯುವತಿ, ತಾನು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ.
ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಅದೇ ಠಾಣೆಗೆ ಸ್ವಯಂಪ್ರೇರಿತವಾಗಿ ಪ್ರಿಯಕರನೊಂದಿಗೆ ಬಂದ ಯುವತಿ, ತಾನು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಹ*ತ್ಯೆ!
ಪೋಷಕರು ಎಷ್ಟೇ ಕರೆದರೂ ಒಪ್ಪದ ಮಗಳು ಗಂಡನೊಂದಿಗೇ ಹೋದಾಗ, ಆಕೆಯಿದ್ದ ಪೊಲೀಸ್ ವಾಹನಕ್ಕೂ ಅಡ್ಡಬಿದ್ದು ಮಗಳನ್ನು ಓಲೈಸಲು ಪೋಷಕರು ಪ್ರಯತ್ನಿಸಿದ್ದಾರೆ. ಆದರೂ ಹೆತ್ತ ಕರುಳಿಗೆ ಸಮಾಧಾನವಾಗದೇ ಪೊಲೀಸ್ ಠಾಣೆಯ ಮುಂದೇ ಕುಳಿತು ತಂದೆ ತಾಯಿಯಿಬ್ಬರೂ ಗೋಗರೆದಿದ್ದಾರೆ. ಮಗಳು ಮಾತ್ರ ತಂದೆ ತಾಯಿಯ ಮುಖವನ್ನೂ ನೋಡದೆ ಅನ್ಯಕೋಮಿನ ಪ್ರಿಯಕರನೊಂದಿಗೆ ಹೊರಟು ಹೋಗಿದ್ದಾಳೆ.

ನೋಡಿರಿ

