ಆರ್‌ಸಿಬಿ ತಂಡಕ್ಕೆ ಪ್ಲೇ ಆಫ್ ಹಾದಿ ದುರ್ಗಮ – ಬೌಲರ್‌ಗಳ ಬಗ್ಗೆ ಕ್ಯಾಪ್ಟನ್ ಗರಂ
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಸೋಲು ಕಂಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಸೂರ್ಯನ ಪ್ರಖರ ಬ್ಯಾಟಿಂಗ್ ಮುಂದೆ ಆರ್‌ಸಿಬಿ ಮಂಕಾಗಿ ಹೋಗಿತ್ತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ವಿಭಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಐಪಿಎಲ್ ಟೂರ್ನಿಯಿಂದ ಹೊರಬಿದ್ದ ಕೆ.ಎಲ್ ರಾಹುಲ್ – ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ಗೂ ಡೌಟ್..!
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇ ಆಫ್ ಹಾದಿ ದುರ್ಗಮವಾಗಿದೆ. ಮಂಗಳವಾರ ಮುಂಬೈ ಇಂಡಿಯನ್ಸ್ ವಿರುದ್ಧ ಸೋತ ಪರಿಣಾಮ ಆರ್‌ಸಿಬಿ ಪಾಯಿಂಟ್ ಟೇಬಲ್‌ನಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದೆ. 200 ರನ್‌ಗಳ ಟಾರ್ಗೆಟ್ ನೀಡಿದ್ದರೂ ಆರ್‌ಸಿಬಿ ಬೌಲರ್‌ಗಳಿಗೆ ಮುಂಬೈ ಇಂಡಿಯನ್ಸ್ ಆಟಗಾರರನ್ನು ಕಟ್ಟಿಹಾಕಲು ಸಾಧ್ಯವಾಗಿರಲಿಲ್ಲ. ಪಂದ್ಯ ಮುಗಿದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ವಿಭಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯವಾಗಿ ಮೊದಲಾರ್ಧದಲ್ಲಿ ಪರ್ಪಲ್ ಕ್ಯಾಪ್ ತೊಟ್ಟು ಮಾರಕವಾಗಿದ್ದ ಮೊಹಮ್ಮದ್ ಸಿರಾಜ್ ಈಗ ರನ್ ಬಿಟ್ಟುಕೊಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಮೊಹಮ್ಮದ್ ಸಿರಾಜ್ ಐಪಿಎಲ್ 2023ರ ಮೊದಲ ಅವಧಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದರು. ಆದರೆ, ಈಗ ಅದೇ ಲಯ ಕಳೆದುಕೊಂಡಿದ್ದಾರೆ. ನಮ್ಮ ಬೌಲರ್ಸ್ ಬೇಗನೆ ಫಾರ್ಮ್‌ಗೆ ಬಂದು ಸಕಾರಾತ್ಮಕವಾಗಿ ಆಡಬೇಕು ಎಂದು ಡುಪ್ಲೆಸಿಸ್ ಹೇಳಿದ್ದಾರೆ.