ಚುನಾವಣೆ ಸೋಲಿನ ಬಳಿಕ ಮತ್ತೆ ಚಿತ್ರರಂಗಕ್ಕೆ ನಿಖಿಲ್‌ ಕುಮಾರಸ್ವಾಮಿ – ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ

ಚುನಾವಣೆ ಸೋಲಿನ ಬಳಿಕ ಮತ್ತೆ ಚಿತ್ರರಂಗಕ್ಕೆ ನಿಖಿಲ್‌ ಕುಮಾರಸ್ವಾಮಿ – ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ

ಚುನಾವಣೆಯಲ್ಲಿ ಸಾಲು ಸಾಲು ಸೋಲಿನ ಬಳಿಕ ನಿಖಿಲ್‌ ಕುಮಾರಸ್ವಾಮಿ ಮತ್ತೆ ಚಿತ್ರರಂಗದತ್ತ ಮುಖಮಾಡಿದ್ದಾರೆ. ಸುದೀರ್ಘ ವಿರಾಮದ ನಂತರ ನಿಖಿಲ್‌ ಮತ್ತೆ ಸಿನಿಮಾಗಳಲ್ಲಿ ನಟಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ.

ಇದನ್ನೂ ಓದಿ:ಚಿತ್ರರಂಗಕ್ಕೆ ಗುಡ್ ಬೈ ಹೇಳ್ತಾರಾ ಸಮಂತಾ? – ನಿರ್ಮಾಪಕರಿಗೆ ಅಡ್ವಾನ್ಸ್ ಹಣ ವಾಪಸ್ ಮಾಡಿದ್ಯಾಕೆ?

ನಟ ನಿಖಿಲ್‌ ಕುಮಾರಸ್ವಾಮಿ ಲೋಕಸಭೆ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಹಿನ್ನೆಲೆ ನಿಖಿಲ್‌ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು. ಹೀಗಾಗಿ ಸಿನಿಮಾದಿಂದ ಕೊಂಚ ಕಾಲ ದೂರ ಉಳಿದಿದ್ದರು. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡುತ್ತಿದ್ದಾರೆ.

ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ ಮತ್ತು ಯದುವೀರ ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ಮತ್ತೊಂದು ಹೆಸರಾಂತ ಸಂಸ್ಥೆ ನಿಖಿಲ್ ಚಿತ್ರ ಮಾಡಲು ಮುಂದಾಗಿದೆ.

ದಕ್ಷಿಣ ಭಾರತದ ಶ್ರೀಮಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಇದೀಗ ನಿಖಿಲ್ ಅವರ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಈಗಾಗಲೇ ನಿಖಿಲ್ ಜೊತೆ ಮಾತುಕತೆಯನ್ನೂ ಅದು ಆಡಿದೆ. ನಿಖಿಲ್ ಕೂಡ ಆ ಕಂಪೆನಿಯಲ್ಲಿ ಕೆಲಸ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನುವುದು ಸದ್ಯಕ್ಕಿರುವ ವರ್ತಮಾನ ಎಂದು ಮೂಲಗಳು ತಿಳಿಸಿವೆ.

suddiyaana