‘ಆದಿಪುರುಷ್’ ಚಿತ್ರದ ನಂತರ ‘ಹನುಮಾನ್’ ಸಿನಿಮಾದ ಮೇಲೆ ಹೆಚ್ಚಿದ ನಿರೀಕ್ಷೆ..!
ಆದಿಪುರುಷ್ ಚಿತ್ರ ರಿಲೀಸ್ ಆದ ಮೇಲೆ ಗ್ರಾಫಿಕ್ಸ್ ವಿಚಾರದ ಬಗ್ಗೆ ಚರ್ಚೆ ಜೋರಾಗಿಯೇ ನಡೆಯುತ್ತಿದೆ. ಈ ಸಿನಿಮಾದಲ್ಲಿ ಪ್ರಭಾಸ್ ರಾಮನಾಗಿ ಅಭಿಮಾನಿಗಳ ಮನಗೆದ್ದರೂ ಕೂಡಾ ಓಂ ರಾವತ್ ನಿರ್ದೇಶನದ ಈ ಚಿತ್ರಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ರಾಮಾಯಣದ ಕಥೆ ಬಗ್ಗೆ ಕೆಲವರು ತಕರಾರು ತೆಗೆದರೆ, ಇನ್ನು ಕೆಲವರು ಗ್ರಾಫಿಕ್ಸ್ ವಿಚಾರದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಈಗ ‘ಹನುಮಾನ್’ ಸಿನಿಮಾದ ಬಗ್ಗೆ ನಿರೀಕ್ಷೆಗಳು ಗರಿಗೆದರಿದೆ.
ಇದನ್ನೂ ಓದಿ: ಆದಿಪುರುಷ್ ಸಿನಿಮಾದ ಗ್ರಾಫಿಕ್ಸ್ ನೋಡಿ ಸಿಟ್ಟಿಗೆದ್ದ ಫ್ಯಾನ್ಸ್ – ರಾವಣನ ಹತ್ತು ತಲೆ ನೋಡಿ ಅಭಿಮಾನಿಗಳು ಹೇಳಿದ್ದೇನು?
ಈ ಚಿತ್ರ ಕೂಡ ‘ಆದಿಪುರುಷ್’ ರೀತಿಯೇ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿಬರಲಿದೆ ಎಂಬುದು ವಿಶೇಷ. ಹೆಸರೇ ಸೂಚಿಸುವಂತೆ ಇದರಲ್ಲಿ ಆಂಜನೇಯನ ಕಥೆ ಪ್ರಮುಖವಾಗಿ ಇರಲಿದೆ. ‘ಹನುಮಾನ್’ ಚಿತ್ರಕ್ಕೆ ಪ್ರಶಾಂತ್ ವರ್ಮಾ ಅವರು ನಿರ್ದೇಶನ ಮಾಡುತ್ತಿದ್ದಾರೆ. ತೇಜ ಸಜ್ಜಾ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ, ವೆನ್ನೆಲಾ ಕಿಶೋರ್ ಮುಂತಾದವರು ಕೂಡ ‘ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 2022ರ ನವೆಂಬರ್ ತಿಂಗಳಲ್ಲಿ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು.
ಪೌರಾಣಿಕ ಕಥಾಹಂದರ ಇಟ್ಟುಕೊಂಡು ಸಿನಿಮಾ ಮಾಡುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ‘ಆದಿಪುರುಷ್’ ರೀತಿ ಟೀಕೆಗೆ ಒಳಗಾಗಬೇಕಾಗುತ್ತದೆ ಅನ್ನೋ ಆತಂಕವೂ ಎದುರಾಗಿದೆ. ವಿಶೇಷ ಏನೆಂದರೆ ಇದು ಸಂಪೂರ್ಣ ಪೌರಾಣಿಕ ಕಥೆಯನ್ನು ಹೊಂದಿರುವ ಸಿನಿಮಾ ಅಲ್ಲ. ಹನುಮಂತನ ಪಾತ್ರವನ್ನು ಕೇಂದ್ರವಾಗಿ ಇಟ್ಟುಕೊಂಡು ಬೇರೆಯದೇ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ ಎಂಬುದು ಟೀಸರ್‌ನಲ್ಲಿ ಸುಳಿವು ಸಿಕ್ಕಿದೆ..