‘ಬರ ಇದ್ದಾಗ ಬರಲೇ ಇಲ್ಲ ಎಲೆಕ್ಷನ್ ಹತ್ತಿರ ಬಂದಾಗ ವಾರಕ್ಕೊಂದು ಪ್ರವಾಸ’- ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

‘ಬರ ಇದ್ದಾಗ ಬರಲೇ ಇಲ್ಲ ಎಲೆಕ್ಷನ್ ಹತ್ತಿರ ಬಂದಾಗ ವಾರಕ್ಕೊಂದು ಪ್ರವಾಸ’- ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ

ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರ ಕರ್ನಾಟಕ ರಾಜ್ಯ ಪ್ರವಾಸ ಹೆಚ್ಚುತ್ತಿದೆ. ವಾರಕ್ಕೊಂದು ಬಾರಿಯಾದರೂ ಕರ್ನಾಟಕದತ್ತ ಮೋದಿ ಪ್ರವಾಸ ಫಿಕ್ಸ್ ಆಗಿದೆ. ಮೊನ್ನೆ ಮೊನ್ನೆಯಷ್ಟೇ ಏರ್ ಶೋ ಉಧ್ಘಾಟನೆ ಮಾಡಿಹೋಗಿರುವ ನರೇಂದ್ರ ಮೋದಿ ಇವತ್ತು ಶಿವಮೊಗ್ಗ ಏರ್‌ಫೋರ್ಟ್ ಉದ್ಘಾಟನೆಗೆ ಆಗಮಿಸಿದ್ದಾರೆ. ಎಲೆಕ್ಷನ್ ಮುಗಿಯುವವರೆಗೆ ಕರ್ನಾಟಕದಲ್ಲೇ ಮೋದಿ ಪ್ರವಾಸ ಮಾಡುವುದು ಕೂಡಾ ಈಗಾಗಲೇ ಶೆಡ್ಯೂಲ್ ಆಗಿದೆ. ಈಗ ಎಲೆಕ್ಷನ್‌ ವೇಳೆ ಆಗಿದ್ದರಿಂದ ಪದೇ ಪದೇ ರಾಜ್ಯಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಬರ ಸಂಕಷ್ಟ ಇರುವಾಗ ಎಲ್ಲಿ ಹೋಗಿದ್ದರು. ಜನರ ಕಷ್ಟಕ್ಕೆ ಬರದ ಪ್ರಧಾನಮಂತ್ರಿಗಳು ಈಗ ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಇಷ್ಟೊಂದು ಬಾರಿ ಬರುತ್ತಿದ್ದಾರೆ ಅಂತಾ ಕಾಂಗ್ರೆಸ್ ಕುಹಕವಾಡಿದೆ. ಜೊತೆಗೆ ಸರಣಿ ಟ್ವೀಟ್ ಮಾಡುವ ಮೂಲಕ ಮೋದಿಯವರ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದೆ.

ಇದನ್ನೂ ಓದಿ:  ಮಲೆನಾಡಿಗರ ದಶಕಗಳ ಕನಸು ಕೊನೆಗೂ ನನಸು – ನೂತನ ವಿಮಾನ ನಿಲ್ದಾಣಕ್ಕೆ ಬಂದಿಳಿದ ‘ನಮೋ’!

‘ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ, ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದಾರೆ. ಈ ದ್ರೋಹಕ್ಕೆ ಧನ್ಯವಾದಗಳು! ಥ್ಯಾಂಕ್ಯೂ ಮೋದಿ (#ThankYouModi) ಎಂಬ ಹ್ಯಾಷ್​​ಟ್ಯಾಗ್ ಅಡಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಬೇಟಿ ನೀಡಿದ ಸಂದರ್ಭದಲ್ಲೇ ಅವರನ್ನು ಕುರಿತು ಕಾಂಗ್ರೆಸ್ ವ್ಯಂಗ್ಯವಾಡಿದೆ. 40% ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಸಂತೋಷ್ ಪಾಟೀಲ್ ಪತ್ರಕ್ಕೆ ಪ್ರಧಾನಿಯ ಉತ್ತರವಿಲ್ಲ. ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ ಮೋದಿ ಅವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರವು ಡಬಲ್ ವೇಗದಲ್ಲಿ ಮುನ್ನುಗ್ಗುತ್ತಿದೆ. ಮೋದಿ ಅವರೇ, ಭ್ರಷ್ಟಾಚಾರಕ್ಕೆ ಯಾವುದೇ ತಡೆಯಿಲ್ಲದೆ, ಯಾವುದೇ ಅಂಜಿಕೆ, ಅಳುಕಿಲ್ಲದೆ 40% ಕಮಿಷನ್ ಸರ್ಕಾರ ನಡೆಸಿದ್ದಕ್ಕೆ ತಮಗೆ ಧನ್ಯವಾದಗಳು. ಮೋದಿ ಹೈ ತೊ ಮುಮ್ಕಿನ್ ಹೈ ಎನ್ನುವಂತೆ ಇದು ಸಾಧ್ಯವಾಗಿದ್ದು ನಿಮ್ಮಿಂದಲೇ ಅಲ್ಲವೇ! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

suddiyaana