133 ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ! –  ಹಾರ್ಡ್​ ಲ್ಯಾಂಡಿಂಗ್ ವೇಳೆ ಪುಡಿ ಪುಡಿಯಾದ ಚಕ್ರ!

133 ಪ್ರಯಾಣಿಕರಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿಕ ದೋಷ! –  ಹಾರ್ಡ್​ ಲ್ಯಾಂಡಿಂಗ್ ವೇಳೆ ಪುಡಿ ಪುಡಿಯಾದ ಚಕ್ರ!

ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ತಾಂತಿಕದೋಷ ಕಂಡು ಬರುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗ್ತಿದೆ. ಇದೀಗ  ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಲ್ಯಾಂಡಿಂಗ್ ವೇಳೆ ನೋಸ್ ವೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲೆಟ್‌ ಸಮಯಪ್ರಜ್ಞೆಯಿಂದ ದೊಡ್ಡ ಅವಘಡ ತಪ್ಪಿದೆ.

ಇದನ್ನೂ ಓದಿ: ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ ಕೊರತೆ –  ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ ಮಾಡಿದ ಮುಕೇಶ್ ಅಂಬಾನಿ ಕಂಪನಿ!

ಹೈದರಾಬಾದ್‌ನಿಂದ ಥೈಲ್ಯಾಂಡ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ತಾಂತ್ರಿದೋಷ ಕಂಡುಬಂದಿದೆ. ಫುಕೆಟ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವಾಗ ವಿಮಾನದ ನೋಸ್ ವೀಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು,  ಪೈಲಟ್ ಅತ್ಯಂತ ಚಾಣಾಕ್ಷತನದಿಂದ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ 133 ಪ್ರಯಾಣಿಕರು ಸೇಫ್ ಆಗಿದ್ದಾರೆ. ಈ ಘಟನೆಯ ನಂತರ ಫುಕೆಟ್ ಏರ್‌ಪೋರ್ಟ್‌ನ ರನ್‌ವೇಯನ್ನು ಮುಚ್ಚಲಾಗಿದೆ.

ಅಪಾಯದಿಂದ ಪಾರಾದ ವಿಮಾನ ಬೋಯಿಂಗ್ 737-ಮ್ಯಾಕ್ಸ್8 ಮಾದರಿಯದ್ದಾಗಿದೆ. ಮಾರ್ಚ್ 11 ರಂದು ಹೈದರಾಬಾದ್-ಫುಕೆಟ್ ವಿಮಾನವು ಲ್ಯಾಂಡಿಂಗ್ ವೇಳೆ ನೋಸ್ ವೀಲ್ ಸಮಸ್ಯೆಗೆ ಸಿಲುಕಿತು ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿಮಾನದ ಲ್ಯಾಂಡಿಂಗ್ ಗೇರ್ ಸಿಸ್ಟಮ್‌ನಲ್ಲಿ ನೋಸ್ ವೀಲ್ ಬಹಳ ಮುಖ್ಯವಾದ ಭಾಗವಾಗಿದೆ. ಈ ವಿಮಾನವು ಹೈದರಾಬಾದ್‌ನಿಂದ ಬೆಳಗ್ಗೆ 6:42ಕ್ಕೆ ಟೇಕ್ ಆಫ್ ಆಗಿ, ಸ್ಥಳೀಯ ಕಾಲಮಾನ ಬೆಳಗ್ಗೆ 11:40ಕ್ಕೆ ಫುಕೆಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಸದ್ಯ ವಿಮಾನವು ರನ್‌ವೇಯಲ್ಲಿ ಸಿಲುಕಿಕೊಂಡಿದೆ. ಹೀಗಾಗಿ, ಸಂಜೆವರೆಗೂ ರನ್‌ವೇ ಬಂದ್ ಆಗಿರಲಿದೆ. ಇದರಿಂದಾಗಿ ಹಲವು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ಡೈವರ್ಟ್ ಮಾಡಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.

Shwetha M