ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ವಿಮಾನ ಸ್ಪೀಡನ್​ನಲ್ಲಿ ತುರ್ತು ಭೂಸ್ಪರ್ಶ – ಕಾರಣವೇನು ಗೊತ್ತಾ..!?

ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ವಿಮಾನ ಸ್ಪೀಡನ್​ನಲ್ಲಿ ತುರ್ತು ಭೂಸ್ಪರ್ಶ – ಕಾರಣವೇನು ಗೊತ್ತಾ..!?

300 ಪ್ರಯಾಣಿಕರನ್ನ ಹೊತ್ತು ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ಪೀಡನ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅಮೆರಿಕದ ನೆವಾರ್ಕ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಸದ್ಯ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ.

ಇದನ್ನೂ ಓದಿ : ಕೆಎಸ್ ಆರ್ ಟಿಸಿ ಪ್ರಯಾಣಿಕರಿಗೆ ‘ಐಷಾರಾಮಿ’ ಗಿಫ್ಟ್ –  ರಸ್ತೆಗಿಳಿದವು ‘ಅಂಬಾರಿ ಉತ್ಸವ್’ ಬಸ್​ಗಳು..!  

ಅಮೆರಿಕದ ನೆವಾರ್ಕ್‌ ಗೆ ದೆಹಲಿಯಿಂದ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ಒಂದರಲ್ಲಿ ತೈಲ ಸೋರಿಕೆಯಾಗುತ್ತಿತ್ತು. ಹೀಗಾಗಿ ಸ್ಟಾಕ್‌ಹೋಮ್‌ಗೆ ತಿರುಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಂಗ್ 777-300ER ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ವಿಮಾನದ ಎಂಜಿನ್ ಒಂದರಲ್ಲಿ ತೈಲ ಸೋರಿಕೆಯಾಗಿದೆ ಎಂದು ಹಿರಿಯ DGCA ಅಧಿಕಾರಿ ತಿಳಿಸಿದ್ದಾರೆ. ತೈಲ ಸೋರಿಕೆಯ ನಂತರ, ಎಂಜಿನ್ ಅನ್ನು ಸ್ಥಗಿತಗೊಳಿಸಲಾಯಿತು ಮತ್ತು ನಂತರ ವಿಮಾನವು ಸುರಕ್ಷಿತವಾಗಿ ಸ್ಟಾಕ್‌ಹೋಮ್‌ನಲ್ಲಿ ಲ್ಯಾಂAir Indiaಡ್ ಆಯಿತು ಎಂದು ಮಾಹಿತಿ ನೀಡಿದ್ದಾರೆ.

ಪರಿಶೀಲನೆಯ ಸಮಯದಲ್ಲಿ, ಎಂಜಿನ್ ಎರಡರ ಡ್ರೈನ್ ಮಾಸ್ಟ್‌ನಿಂದ ತೈಲ ಹೊರಬರುತ್ತಿರುವುದು ಕಂಡುಬಂದಿದೆ. ಹೀಗಾಗಿ ಯುಎಸ್‌ನ ನೆವಾರ್ಕ್‌ನಿಂದ ಹೊರಟಿದ್ದ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಸ್ವೀಡನ್‌ನ ಸ್ಟಾಕ್‌ಹೋಮ್‌ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

suddiyaana