ಅಹಮದಾಬಾದ್‌ ವಿಮಾನ ದುರಂತ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು – ಬಚಾವ್‌ ಆದ ವ್ಯಕ್ತಿ?

ಅಹಮದಾಬಾದ್‌ ವಿಮಾನ ದುರಂತ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು – ಬಚಾವ್‌ ಆದ ವ್ಯಕ್ತಿ?

ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತ ಸಂಭವಿಸಿದೆ. ಇದೀಗ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ ಘಟನಾ ಬಗ್ಗೆ ಮಾಹಿತಿ ನೀಡಿದೆ. ವಿಮಾನದಲ್ಲಿ 242 ಮಂದಿ ಇದ್ದರು. ಇದ್ರಲ್ಲಿ 241 ಮಂದಿ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ ಎಂದು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ  ಮಾಹಿತಿ ನೀಡಿದೆ.

ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ವಿಮಾನ ದುರಂತ – ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

ಈ ಕುರಿತು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಜೂನ್‌ 12ರಂದು ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಗಿದೆ ಎಂದು ಏರ್‌ ಇಂಡಿಯಾ ದೃಢಪಡಿಸಿದೆ. 12 ವರ್ಷದ ಹಳೆಯ ಬೋಯಿಂಗ್‌ 787-8 ವಿಮಾನವು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟಿದ್ದು, 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್‌ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆಯಾಗಿದ್ದಾರೆ. ದುರಂತರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಏರ್‌ ಇಂಡಿಯಾ ಆಳವಾದ ಸಂತಾಪ ಸೂಚಿಸುತ್ತದೆ. ನಾವು ಸಂತ್ರಸ್ತ ಕುಟುಂಬಗಳೊಂದಿಗೆ ಇದ್ದೇವೆ ಎಂದು ಹೇಳಿದೆ.

Shwetha M