ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ

ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್  ಅಂತ್ಯಕ್ರಿಯೆ

ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ  ಅಜಿತ್ ಪವಾರ್ ಅವರ  ಅಂತ್ಯಕ್ರಿಯೆ  ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯುಲಿದೆ. ಜನರು ಅಂತಿಮ ನಮನ ಸಲ್ಲಿಸಲು ಅನುಕೂಲವಾಗುವಂತೆ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಇರಿಸಲಾಗಿದೆ. ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು ಸ್ಥಳೀಯರು ಅಂತಿಮ ದರ್ಶನವನ್ನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಎಣ್ಣೆ ಏಟಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸ್ಯಾಂಡಲ್‌ವುಡ್‌ ನಟ! – ನಟ ಮಯೂರ್ ಪಟೇಲ್ ವಿರುದ್ಧ FIR!

ನಿಧನದ ಹಿನ್ನೆಲೆಯಲ್ಲಿ, ಮಹಾರಾಷ್ಟ್ರ ಸರ್ಕಾರ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಸ್ಮಿಕ ಸಾವಿನ ವರದಿ (ಎಡಿಆರ್) ದಾಖಲಿಸಿದ್ದಾರೆ. ಹೆಚ್ಚುವರಿಯಾಗಿ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ತನಿಖೆಯನ್ನು ವಹಿಸಿಕೊಂಡಿದೆ.

ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದ ಬಳಿ ಲಿಯರ್‌ಜೆಟ್ 45 ವಿಮಾನ ಅಪಘಾತಕ್ಕೀಡಾಗಿ ಉಪಮುಖ್ಯಮಂತ್ರಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದರು. VT-SSK ನೋಂದಣಿ ಸಂಖ್ಯೆಯನ್ನು ಹೊಂದಿರುವ ಈ ವಿಮಾನವನ್ನು VSR ವೆಂಚರ್ಸ್ ನಿರ್ವಹಿಸುತ್ತಿತ್ತು. ಅಪಘಾತಕ್ಕೀಡಾದ ಈ ಜೆಟ್ ಖಾಸಗಿಯಾಗಿ ನಿರ್ವಹಿಸಲ್ಪಡುವ ಚಾರ್ಟರ್ಡ್ ವಿಮಾನವಾಗಿವೆ. ಅದು ಮುಂಬೈನಿಂದ ನಿಗದಿತ ರಾಜಕೀಯ ರ‍್ಯಾಲಿಗಳ ಸರಣಿಗಾಗಿ ಹೊರಟಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.ನಾಗರಿಕ ವಿಮಾನಯಾನ ನಿರ್ದೇಶನಾಲಯದ (DGCA) ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನವು ಬೆಳಗ್ಗೆ 8:45 ಕ್ಕೆ ಅಂತಿಮ ಹಂತದಲ್ಲಿ ತೀವ್ರ ತಾಂತ್ರಿಕ ತೊಂದರೆಗಳು ಮತ್ತು ಅಸ್ಥಿರತೆಯನ್ನು ಎದುರಿಸಿತು. ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುವಾಗ ಪೈಲಟ್ ನಿಯಂತ್ರಣ ಕಳೆದುಕೊಂಡರು ಎಂದು ವರದಿಯಾಗಿದೆ.

Kishor KV