ರಾಜ್ಯಸಭೆ ಚುನಾವಣೆ ಮುಕ್ತಾಯ: 4 ಸ್ಥಾನಗಳಲ್ಲಿ ಕೈಗೆ 3, ಕಮಲಕ್ಕೆ 1 ಗೆಲುವು – ಕಾಂಗ್ರೆಸ್ ಪ್ಲ್ಯಾನ್ ಕೊನೆಗೂ ಸಕ್ಸಸ್!

ರಾಜ್ಯಸಭೆ ಚುನಾವಣೆ ಮುಕ್ತಾಯ: 4 ಸ್ಥಾನಗಳಲ್ಲಿ ಕೈಗೆ 3, ಕಮಲಕ್ಕೆ 1 ಗೆಲುವು – ಕಾಂಗ್ರೆಸ್ ಪ್ಲ್ಯಾನ್ ಕೊನೆಗೂ ಸಕ್ಸಸ್!

ಭಾರಿ ಕುತೂಹಲ ಮೂಡಿಸಿದ್ದ ರಾಜ್ಯಸಭೆ ಚುನಾವಣೆ ಮುಕ್ತಾಯಗೊಂಡಿದ್ದು, ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂವರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯಸಭಾ ಚುನಾವಣೆಯ ತಂತ್ರಗಾರಿಕೆ ರೂಪಿಸುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ಇದನ್ನೂ ಓದಿ: ಅನಂತ್ ಅಂಬಾನಿ ಮದುವೆಗೆ ಶುರುವಾಯ್ತು ಕೌಂಟ್‌ಡೌನ್- ಮದುಮಗನ ತೂಕ ಮತ್ತೆ ಹೆಚ್ಚಳ ಆಗಿದ್ದು ಹೇಗೆ?

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ ಪಕ್ಷದಿಂದ ಸ್ಪರ್ಧಿಸಿದ್ದ ಅಜಯ್ ಮಾಕನ್​, ನಾಸೀರ್ ಹುಸೇನ್​, ಜಿ.ಸಿ ಚಂದ್ರಶೇಖರ್​​ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಹೀನಾಯ ಸೋಲು ಅನುಭವಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅಜಯ್ ಮಕನ್ ಗೆ 47, ಸೈಯದ್ ನಾಸೆರ್ ಹುಸೇನ್ ಗೆ 47 ಹಾಗೂ ಜಿ.ಸಿ ಚಂದ್ರಶೇಖರ್ ಗೆ 45 ಮತಗಳು ಬಿದ್ದಿವೆ. ಇನ್ನು ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆಗೆ 48 ಮತಗಳು ಬಿದ್ದಿದ್ದು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 35 ಮತಗಳು ಸಿಕ್ಕಿವೆ.

ಬಿಜೆಪಿಗೆ ಕೈಕೊಟ್ಟ ಎಸ್.ಟಿ ಸೋಮಶೇಖರ್, ಶಿವರಾಮ್ಹೆಬ್ಬಾರ್

ಇನ್ನು ನಿರೀಕ್ಷೆಯಂತೆ ಯಶವಂತಪುರ ಶಾಸಕ ತಮ್ಮ ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದಾರೆ. ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿ ಆಘಾತ ನೀಡಿದ್ದಾರೆ. ಈ ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇಬ್ಬರು ಶಾಸಕರು ತಮ್ಮ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಅಲ್ಲದೇ ರಾಜ್ಯಸಭಾ ಚುನಾವಣೆಯಲ್ಲೂ ಪಕ್ಷಕ್ಕೆ ಮರ್ಮಾಘಾತ ನೀಡಿದ್ದಾರೆ.

Shwetha M