5ನೇ ಹಂತದ ಲೋಕಸಮರ – ಪೌರತ್ವದ ನಂತರ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್
ಲೋಕಸಭೆಗೆ ಐದನೇ ಹಂತದಲ್ಲಿ ಮತದಾನ ಸೋಮವಾರ ನಡೆಯುತ್ತಿದೆ. 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ ಒಟ್ಟು 49 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. ಬಾಲಿವುಡ್ ಸ್ಟಾರ್ಸ್, ಗಣ್ಯರು ಮತದಾನ ಮಾಡಿದ್ದಾರೆ.
ಈವರೆಗೂ ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ವ ಪಡೆದುಕೊಂಡಿದ್ದರು. ಹಾಗಾಗಿ ಮೊದಲ ಬಾರಿಗೆ ಅವರು ಭಾರತದಲ್ಲಿ ಮತದಾನ ಮಾಡಿದ್ದಾರೆ. ಸೋಮವಾರ ಮತದಾನ ಮಾಡಿದ ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹೆಲಿಕಾಪ್ಟರ್ ಪತನ – ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ದುರ್ಮರಣ
ಇನ್ನು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಅವರು ಸೋಶಿಯಲ್ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ. ಹಾಗೇ ರಾಜ್ಕುಮಾರ್ ರಾವ್ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಅವರು ಕೂಡ ವೋಟ್ ಹಾಕಿದ್ದಾರೆ.
ಪರೇಶ್ ರಾವಲ್ ಅವರು ವೋಟ್ ಮಾಡಿದ್ದಾರೆ. ವೋಟ್ ಹಾಕಿದ ಬಳಿಕ ಎಲ್ಲರಿಗೂ ಮತ ಹಾಕುವಂತೆ ಕೋರಿದ್ದಾರೆ. ಮಹೇಶ್ ಭಟ್ ಅವರು ಮತ ಹಾಕಿದ್ದಾರೆ. ಬಾಲಿವುಡ್ನಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ಅವರು ಗುರುತಿಸಿಕೊಂಡಿದ್ದಾರೆ.ಹಿರಿಯ ನಟ ಧರ್ಮೇಂದ್ರ ಅವರು ವೋಟಿಂಗ್ ಬೂತ್ಗೆ ಬಂದು ವೋಟ್ ಮಾಡಿದ್ದಾರೆ.
ಇನ್ನು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ದಿನೇಶ್ ಪ್ರತಾಪ್ ಸಿಂಗ್, ರಾಯ್ ಬರೇಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್, ಮುಂಬೈ ಉತ್ತರ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೊಯೇಲ್, ಅಮಿರ್ ಪುರ್ ನಲ್ಲಿ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಹಾಗೂ ಕೈಸರಗಂಜ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ಈಗಾಗಲೇ ಮತದಾನ ಮಾಡಿದ್ದಾರೆ. ಇನ್ನು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಕುಟುಂಬ ಸಮೇತರಾಗಿ ಮುಂಬೈನಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ಉತ್ತರ ಪ್ರದೇಶದ ಅಮೇಥಿಯಿಂದ ಸ್ಮೃತಿ ಇರಾನಿ ಮತ್ತು ಕೆಎಲ್ ಶರ್ಮಾ, ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ದಿನೇಶ್ ಪ್ರತಾಪ್ ಸಿಂಗ್, ಲಕ್ನೋದಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಹಾರದ ಸರಣ್‍ನಿಂದ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ, ಮಹಾರಾಷ್ಟ್ರ ಕಲ್ಯಾಣದಿಂದ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಡಾ.ಶ್ರೀಕಾಂತ್ ಶಿಂಧೆ, ಮುಂಬೈ ಉತ್ತರದಿಂದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಹಿರಿಯ ವಕೀಲ ಉಜ್ವಲ್ ನಿಕಮ್, ಮಧ್ಯ ಮುಂಬೈ ವರ್ಷಾ ಗಾಯಕ್ವಾಡ್ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ.