ನಟ ಅಕ್ಷಯ್‌ ಕುಮಾರ್‌ ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ! – ಬಾಲಿವುಡ್‌ ನಟ ಹೇಗಿದ್ದಾರೆ?

ನಟ ಅಕ್ಷಯ್‌ ಕುಮಾರ್‌ ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ! – ಬಾಲಿವುಡ್‌ ನಟ ಹೇಗಿದ್ದಾರೆ?

ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಕಾರು ಅಪಘಾತಕ್ಕೆ ಒಳಗಾಗಿದೆ. ಸೋಮವಾರ ಮಧ್ಯರಾತ್ರಿ ಅಕ್ಷಯ್‌ ಕುಮಾರ್‌ ಅವರ ಮರ್ಸಿಡಿಸ್ ಕಾರು ಜುಹುವಿನ ಗಾಂಧಿಗ್ರಾಮ್ ರಸ್ತೆಯ ಇಸ್ಕಾನ್ ದೇವಸ್ಥಾನದ ಬಳಿ ವೇಗವಾಗಿ ಬಂದು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಪಡಿತರ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್‌ನ್ಯೂಸ್! – ಈ ನಂಬರ್‌ ಹೇಳಿದ್ರೆ  ಇನ್ಮುಂದೆ ಪಡಿತರ ಸಿಗುತ್ತೆ!

ಸೋಮವಾರ ರಾತ್ರಿ ಸುಮಾರು 8:45 ರಿಂದ 9 ಗಂಟೆಯ ವೇಳೆಗೆ ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ ವಿಮಾನ ನಿಲ್ದಾಣದಿಂದ ಮನೆಗೆ ಮರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರು ಜುಹುವಿನ ಗಾಂಧಿಗ್ರಾಮ್ ರಸ್ತೆಯ ಇಸ್ಕಾನ್ ದೇವಸ್ಥಾನದ ಬಳಿ ವೇಗವಾಗಿ ಬಂದು ಆಟೋ ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ನಟ ಅಕ್ಷಯ್ ಕುಮಾರ್ ಮತ್ತು ಅವರ ಪತ್ನಿ ಟ್ವಿಂಕಲ್ ಖನ್ನಾ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಕಾರು ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಈ ಅಪಘಾತದಲ್ಲಿ ಆಟೋ ಚಾಲಕ ಮತ್ತು ಆಟೋದಲ್ಲಿದ್ದ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಅವರನ್ನು ಸಮೀಪದ ಕ್ರಿಟಿಕಲ್ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಮುಂಬೈ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಇನ್ನೂ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲವಾದರೂ, ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.  ಇದು ಅಕ್ಷಯ್ ಕುಮಾರ್ ಅವರ ಎಸ್ಕಾರ್ಟ್ ವಾಹನ ಎನ್ನಲಾಗುತ್ತಿದ್ದು, ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

Shwetha M