ರಾಜ್ಯದ ಮದ್ಯ ಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಮದ್ಯ ಸಿಗಲ್ಲ!

ರಾಜ್ಯದ ಮದ್ಯ ಪ್ರಿಯರಿಗೆ ಬಿಗ್‌ ಶಾಕ್‌ – ಜೂನ್‌ ಮೊದಲ ವಾರ ಮದ್ಯ ಸಿಗಲ್ಲ!

ಮದ್ಯ ಪ್ರಿಯರಿಗೆ ಶಾಕಿಂಗ್‌ ಸುದ್ದಿಯಿದೆ. ಜೂನ್‌ ಮೊದಲ ವಾರ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿವೆ.

ಹೌದು, ಜೂನ್ ನ ಮೊದಲ ವಾರ ಮದ್ಯಪ್ರಿಯರಿಗೆ ಎಣ್ಣೆ  ಸಿಗೋದಿಲ್ಲ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್ ಆಗಲಿದೆ. ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಇರೋದ್ರಿಂದ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶ ನೀಡಿದೆ.

ಇದನ್ನೂ ಓದಿ: ಹಾಸನ ಪೆನ್‌ಡ್ರೈವ್‌ ಕೇಸ್‌ – ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟ ವಿದೇಶಾಂಗ ಸಚಿವಾಲಯ

ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಹಾಗಾಗಿ ಅಂದೂ ಸಹ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.

ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ಜೂನ್ ತಿಂಗಳ ಮೊದಲ ವಾರ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಿದೆ.  ಹೀಗಾಗಿ ಮದ್ಯ ಪ್ರಿಯರು ಈ ತಿಂಗಳಾಂತ್ಯದಲ್ಲೇ ಸ್ಟಾಕ್ ಮಾಡಿಕೊಳ್ಳಬೇಕಾಗಿದೆ.

Shwetha M