ಕರೆಂಟ್‌ ಕಳ್ಳ ಕುಮಾರಸ್ವಾಮಿ ಎಂಬ ಆರೋಪ – ಶುರುವಾಯ್ತು ಮತ್ತೊಂದು ಸುತ್ತಿನ ಕಾಂಗ್ರೆಸ್‌ – ಜೆಡಿಎಸ್‌ ಕಾಳಗ!

ಕರೆಂಟ್‌ ಕಳ್ಳ ಕುಮಾರಸ್ವಾಮಿ ಎಂಬ ಆರೋಪ – ಶುರುವಾಯ್ತು ಮತ್ತೊಂದು ಸುತ್ತಿನ ಕಾಂಗ್ರೆಸ್‌ – ಜೆಡಿಎಸ್‌ ಕಾಳಗ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ನಡುವಿನ ಕರೆಂಟ್‌ ಕಳ್ಳತನ ಆರೋಪಕ್ಕೆ ಹೊಸ ತಿರುವು ಸಿಕ್ಕಿದೆ. ಕಳೆದ ರಾತ್ರಿ ಕರೆಂಟ್‌ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳು ಜೆಡಿಎಸ್‌ ಕೇಂದ್ರ ಕಚೇರಿ ಸಮೀಪದ ಗೋಡೆಗಳಿಗೆ ʼಕರೆಂಟ್‌ ಕಳ್ಳ ಕುಮಾರಸ್ವಾಮಿʼ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಕರೆಂಟ್‌ ಕಳ್ಳತನ?

ದೀಪಾವಳಿ ಹಬ್ಬದ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್‌. ಡಿ ಕುಮಾರಸ್ವಾಮಿ ಅವರ ಬೆಂಗಳೂರಿನ ಜೆಪಿ ನಗರದಲ್ಲಿರುವ ಬಂಗಲೆಗೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಈ ದೀಪಾಲಂಕಾರಕ್ಕೆ ಮನೆ ಮುಂದಿದ್ದ ಕರೆಂಟ್‌ ಕಂಬದಿಂದ ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆಯಲಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಮೇತ ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ, ಕುಮಾರಸ್ವಾಮಿ ವಿರುದ್ದ ಕರೆಂಟ್‌ ಕಳ್ಳತನದ ಆರೋಪ ಮಾಡಿತ್ತು. ಇದಾದ ನಂತರ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ, ಅಚಾತುರ್ಯದಿಂದ ಘಟನೆ ನಡೆದಿದೆ ಎಂದು ಒಪ್ಪಿಕೊಂಡಿದ್ದರು. ಅಲ್ಲದೇ ದಂಡ ಕಟ್ಟಲು ಸಿದ್ದನಿದ್ದೇನೆ  ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ:  ಬಿ ವೈ ವಿಜಯೇಂದ್ರಗೆ ಇಂದು ‘ಪಟ್ಟಾಭಿಷೇಕ’ -ಕಮಲ ಪಾಳಯದಲ್ಲಿ ಸಂಭ್ರಮ

ಪೋಸ್ಟರ್‌ ಅಂಟಿಸಿದ್ದು ಯಾರು?

ಕುಮಾರಸ್ವಾಮಿ ಕರೆಂಟ್‌ ಕಳ್ಳತನ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರ ನಡುವೆ ಮಂಗಳವಾರ ಇಡೀ ದಿನ ಆರೋಪ ಪ್ರತ್ಯಾರೋಪ ನಡೆದಿತ್ತು. ಇದಾದ ನಂತರ ಕಳೆದ ರಾತ್ರಿ ಜೆಡಿಎಸ್‌ ಕಚೇರಿ ಎದುರು ಪೋಸ್ಟರ್‌ಗಳನ್ನು ಹಾಕಲಾಗಿದೆ.  ಹೀಗಾಗಿ ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಇರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಪೋಸ್ಟರ್‌ನಲ್ಲಿ ಏನೇನಿದೆ?

ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಕಚೇರಿ ಗೋಡೆ ಮೇಲೆ ಅಂಟಿಸಿರು ಪೋಸ್ಟರ್‌ನಲ್ಲಿ ಕುಮಾರಸ್ವಾಮಿ ಕರೆಂಟ್‌ 200 ಯುನಿಟ್‌ ಮಾತ್ರ ಉಚಿತ ನೆನಪಿಟ್ಟುಕೊಳ್ಳಿ, ಹೆಚ್ಚು ಕದಿಯಬೇಡಿ. ಕರೆಂಟ್‌ ಕದ್ದರೂ ಎಚ್‌ಡಿಕೆ ಪ್ರಾಮಾಣಿಕತೆಯನ್ನು ಮೆಚ್ಚಲೇಬೇಕು ಎಂದು ಪೋಸ್ಟರ್‌ಗಳಲ್ಲಿ ಬರೆಯಲಾಗಿದೆ.

Shwetha M