ಬಿಜೆಪಿ ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ ಸಾಬೀತು – ಚಿತ್ತಾಪುರದಲ್ಲಿ ಮೋದಿರ್‍ಯಾಲಿ ರದ್ದು!

ಬಿಜೆಪಿ ಅಭ್ಯರ್ಥಿ ವಿರುದ್ಧ ಕಳ್ಳತನ ಆರೋಪ ಸಾಬೀತು – ಚಿತ್ತಾಪುರದಲ್ಲಿ ಮೋದಿರ್‍ಯಾಲಿ ರದ್ದು!

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಪ್ರಧಾನಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮೇ 6 ರಂದು ಕಲಬುರುಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ಅವರು ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾದ ಹಿನ್ನೆಲೆ ಗುರುವಾರ ನಡೆಸಬೇಕಿದ್ದ ರ್‍ಯಾಲಿ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮೇ 6 ರಂದು ಅಪ್ಪಳಿಸಲಿದೆ ವರ್ಷದ ಮೊದಲ ಚಂಡಮಾರುತ – ಎಲ್ಲೆಲ್ಲಿ ಸೈಕ್ಲೋನ್ ಎಫೆಕ್ಟ್?

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದೆ. ಈ ಹಿನ್ನೆಲೆ ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ ಎನ್ನಲಾಗುತ್ತಿದೆ.

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ ಅಂಗನವಾಡಿ ಮಕ್ಕಳ ವಿತರಿಸುತ್ತಿದ್ದ  ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಇದೀಗ ಈ ಆರೋಪ ಸಾಬೀತಾಗಿದ್ದು ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಮಣಿಕಂಠ ಅವರ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದೇ ಆದ್ರೆ, ಬಿಜೆಪಿ ಮುಜುಗರಕ್ಕೊಳಗಾಗಬೇಕಾಗುವ ಸಾಧ್ಯತೆಗಳಿವೆ. ಅಷ್ಟೇ ಅಲ್ಲದೇ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ನಡೆಯಬೇಕಿದ್ದ ಮೋದಿ ಪ್ರಚಾರವನ್ನು ರದ್ದುಗೊಳಿಸಿದೆ.

suddiyaana