ಕೇಂದ್ರ ಸರ್ಕಾರದಿಂದ ಗುಡ್ನ್ಯೂಸ್! – LPG ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ!

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಇಡೀ ವಿಶ್ವದ ಇಂಧನ ವ್ಯವಸ್ಥೆಯೇ ಅಸ್ತವ್ಯಸ್ತವಾಗಿದೆ. ಭಾರತವೂ ಇದಕ್ಕೆ ಹೊರತಾಗಿಲ್ಲ. ದೇಶದಲ್ಲೂ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯವಾಗಿದೆ. ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಜನರು ಹರಸಾಹಸ ಪಡುವಂತಾಗಿದೆ. ಇದೀಗ ಕೇಂದ್ರ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. LPG ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ ಮಾಡಿದೆ.
ಇದನ್ನೂ ಓದಿ: ಕೆಡಿ ಸಿನಿಮಾ ಹಾಡಿಗೆ ಇನ್ನೂ ಮುಗಿಯದ ಸಂಕಷ್ಟ! – ನೋರಾ ಫತೇಹಿ, ಸಂಜಯ್ ದತ್ಗೆ ಮತ್ತೊಮ್ಮೆ ನೋಟಿಸ್
ಎಲ್ಪಿಜಿ ಬಿಕ್ಕಟ್ಟಿನಿಂದಾಗಿ ವಲಸಿಗ ಕಾರ್ಮಿಕ ಬಹಳ ಕಷ್ಟ ಎದುರಿಸುತ್ತಿದ್ದಾರೆ. ಇವರಿಗೆ ನಿರಾಳ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಣ್ಣ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯನ್ನು ಹೆಚ್ಚಿಸಿದೆ. ವರದಿಗಳ ಪ್ರಕಾರ ಸರ್ಕಾರವು ಎಲ್ಲಾ ರಾಜ್ಯಗಳಿಗೂ 5 ಕಿಲೋ ತೂಕದ ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್ಗಳ ಹಂಚಿಕೆಯನ್ನು ಎರಡು ಪಟ್ಟು ಹೆಚ್ಚಿಸಿದೆ. ಇದರಿಂದ ಈ ಸಣ್ಣ ಗ್ಯಾಸ್ ಸಿಲಿಂಡರ್ ಲಭ್ಯತೆ ದ್ವಿಗುಣಗೊಂಡಿದೆ.
ಮಾರ್ಚ್ 2 ಮತ್ತು 3ರಂದು ನಿತ್ಯ ಸರಾಸರಿ ವಿತರಿಸಲಾಗುತ್ತಿದ್ದ ಸಿಲಿಂಡರ್ಗಳ ಸಂಖ್ಯೆಯನ್ನು ಆಧಾರವಾಗಿಟ್ಟುಕೊಳ್ಳಲಾಗಿದೆ. ಹಿಂದಿನ ಆದೇಶದಲ್ಲಿ 5 ಕಿಲೋ ಎಲ್ಪಿಜಿ ಸಿಲಿಂಡರ್ ಹಂಚಿಕೆಯನ್ನು ಶೇ. 20ಕ್ಕೆ ಮಿತಿಗೊಳಿಸಲಾಗಿತ್ತು. ಈಗ ಹೊಸ ಆದೇಶದಲ್ಲಿ ಇದನ್ನು ಹೆಚ್ಚಿಸಲಾಗಿದೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಆದೇಶ ಹೊರಡಿಸಿದೆ.
ಏನಿದು ಫ್ರೀ ಟ್ರೇಡ್ ಎಲ್ಪಿಜಿ ಸಿಲಿಂಡರ್?
ಕೆಲಸದ ನಿಮಿತ್ತ ಬೇರೆ ಬೇರೆ ಊರುಗಳಿಗೆ ವಲಸೆ ಹೋಗಿರುವ ಮತ್ತು ಅಡ್ರೆಸ್ ಪ್ರೂಫ್ ದಾಖಲೆಗಳು ಇಲ್ಲದ, ಹಾಗೂ ಕಡಿಮೆ ಗ್ಯಾಸ್ ಅವಶ್ಯಕತೆ ಇರುವ ಕಾರ್ಮಿಕರು, ವಿದ್ಯಾರ್ಥಿಗಳು, ಉದ್ಯೋಗಸ್ಥರು ಮೊದಲಾದವರಿಗೆ ಗ್ಯಾಸ್ ಪಡೆಯಲು ಅನುಕೂಲವಾಗಲೆಂದು ಸರ್ಕಾರ ಇತ್ತೀಚೆಗೆ ಸಣ್ಣ ಸಣ್ಣ ಎಲ್ಪಿಜಿ ಸಿಲಿಂಡರ್ಗಳನ್ನು ಬಿಡುಗಡೆ ಮಾಡಿದೆ. ಆಧಾರ್ ಇತ್ಯಾದಿ ದಾಖಲೆ ನೀಡಿ ಈ ಸಿಲಿಂಡರ್ಗಳನ್ನು ಪಡೆಯಬಹುದು. ಸೆಕ್ಯೂರಿಟಿ ಡೆಪಾಸಿಟ್ ಇಡುವುದಾಗಲೀ, ಡಿಸ್ಟ್ರಿಬ್ಯೂಟರ್ ಏಜೆನ್ಸಿಯಲ್ಲಿ ನೊಂದಾಯಿಸುವುದಾಗಲೀ ಅವಶ್ಯಕತೆ ಇರುವುದಿಲ್ಲ. 2 ಕಿಲೋ, 5 ಕಿಲೋ ಮತ್ತು 10 ಕಿಲೋ ತೂಕದ ಫೈಬರ್ ಕಾಂಪೊಸಿಟ್ ಸಿಲಿಂಡರ್ಗಳನ್ನು ವಿತರಿಸುತ್ತಿದೆ.
ಸದ್ಯ ಐದು ಕಿಲೋ ಎಲ್ಪಿಜಿ ಸಿಲಿಂಡರ್ಗಳ ಹಂಚಿಕೆಯನ್ನು ಎರಡು ಪಟ್ಟು ಹೆಚ್ಚಿಸುತ್ತಿರುವುದು ವಲಸಿಗ ಕಾರ್ಮಿಕರನ್ನು ಗುರಿಯಾಗಿಸಿ ಮಾತ್ರವೇ. ಎಲ್ಪಿಜಿ ಸಿಗದ ಹಿನ್ನೆಲೆಯಲ್ಲಿ ದೇಶಾದ್ಯಂತ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ ಹೋಗುತ್ತಿರುವ ಟ್ರೆಂಡ್ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿರಬಹುದು. ಈ ಹೆಚ್ಚುವರಿ ಸಿಲಿಂಡರ್ ಹಂಚಿಕೆಯು ವಲಸೆ ಕಾರ್ಮಿಕರಿಗೆ ಮಾತ್ರವೇ ಮಾಡಲಾಗಿದೆ.

ನೋಡಿರಿ

