ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್, ಮೆಗಾಸ್ಟಾರ್ ಚಿರಂಜೀವಿ

ಪವನ್ ಕಲ್ಯಾಣ್ ಬೆಂಬಲಕ್ಕೆ ನಿಂತ ನಟ ಅಲ್ಲು ಅರ್ಜುನ್, ಮೆಗಾಸ್ಟಾರ್ ಚಿರಂಜೀವಿ

ತೆಲುಗು ನಟ ಪವನ್‌ ಕಲ್ಯಾಣ್‌ ರಾಜಕೀಯಕ್ಕೆ ಧುಮುಕಿದ್ದಾರೆ. ಆಂಧ್ರ ರಾಜಕೀಯದಲ್ಲಿ ಹೊಸ ಅಲೆ ಎಬ್ಬಿಸಿದ್ದಾರೆ. ಈಗಾಗಲೇ ಹಲವು ಸ್ಟಾರ್ಸ್‌ ಕೂಡ ಬೆಂಬಲ ಸೂಚಿಸಿದ್ದಾರೆ. ಆದರೆ ಅಲ್ಲು ಅರ್ಜುನ್ ಮಾತ್ರ ಪವನ್ ರಾಜಕೀಯದ ಬಗ್ಗೆ ಯಾವುದೇ ಹೇಳಿಕೆ ನೀಡಿರಲಿಲ್ಲ. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಈಗ ಹಳೆಯದೆಲ್ಲವನ್ನೂ ಮರೆತು ಅಲ್ಲು ಅರ್ಜುನ್ ತಮ್ಮ ಮಾವ ಪವನ್ ಕಲ್ಯಾಣ್​ಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ ಇಬ್ಬರು ಹೆಂಡತಿ ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು!

ಹೌದು, ಆಂಧ್ರದಲ್ಲಿ ಚುನಾವಣಾ ಕಾವು ಜೋರಾಗಿಯೇ ಇದೆ. ಪವನ್‌ ಕಲ್ಯಾಣ್‌ ಬೆಂಬಲಕ್ಕೆ ಸ್ಟಾರ್‌ ನಟರು ಒಬ್ಬೊಬ್ಬರಾಗಿಯೇ ಬರುತ್ತಿದ್ದಾರೆ. ಈಗಾಗಲೇ ಪವನ್‌ ಕಲ್ಯಾಣ್‌ ಗೆ ನಟ ಮೆಗಾಸ್ಟಾರ್ ಚಿರಂಜೀವಿ, ಅವರ ಪುತ್ರ ರಾಮ್​ ಚರಣ್ ಸೇರಿದಂತೆ ಇನ್ನೂ ಕೆಲವರು ಬೆಂಬಲ ಸೂಚಿಸಿದ್ದರು. ಆದ್ರೆ ಅಲ್ಲು ಅರ್ಜುನ್‌ ಈವರೆಗೂ ಯಾಕೆ ಬೆಂಬಲ ಸೂಚಿಸಿಲ್ಲ ಅಂತಾ ಫ್ಯಾನ್ಸ್‌ ಕೇಳ್ತಾ ಇದ್ದರು. ಇದೀಗ ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ. ಪವನ್ ಕಲ್ಯಾಣ್ ಗೆಲುವಿಗೆ ಶ್ರಮಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಪವನ್ ಅವರ ಸಮಾಜಸೇವೆಯನ್ನೂ ಅವರು ಶ್ಲ್ಯಾಘಿಸಿದ್ದಾರೆ.

ಇನ್ನು ನಟ ಚಿರಂಜೀವಿ ಪವನ್ ಕಲ್ಯಾಣ್ ಬೆಂಬಲ ಕುರಿತಂತೆ ವಿಡಿಯೋವೊಂದನ್ನು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.  ಒಳ್ಳೆಯ ಆಡಳಿತಕ್ಕಾಗಿ ಜನಸೇನಾ ಮತ್ತು ಮೈತ್ರಿಕೂಟವನ್ನು ಬೆಂಬಲಿಸುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಅಗತ್ಯವಿದ್ದರೆ ಪವನ್ ಕಲ್ಯಾಣ್  ಮತ್ತು ಅವರ ಪಕ್ಷದ ಪರವಾಗಿಯೂ ಪ್ರಚಾರಕ್ಕೆ ಬರುವುದಾಗಿ ಅವರು ಹೇಳಿಕೊಂಡಿದ್ದಾರೆ.

ಮೇ 13ರಂದು ಆಂಧ್ರಪ್ರದೇಶದ ಚುನಾವಣೆ ನಡೆಯುತ್ತಿದೆ. ಪವನ್ ಕಲ್ಯಾಣ್ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಈಗಾಗಲೇ ಮತದಾರನ ಒಲವು ಪವನ್ ಕಲ್ಯಾಣ್ ಕಡೆ ಇದೆ ಎಂದು ಹೇಳಲಾಗುತ್ತಿದೆ. ನಟ ನಾನಿ ಸೇರಿದಂತೆ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಪವನ್ ಕಲ್ಯಾಣ್ ಪರ ಮತಯಾಚನೆ ಮಾಡುವ ಇಂಗಿತವನ್ನೂ ವ್ಯಕ್ತ ಪಡಿಸಿದ್ದಾರೆ.

Shwetha M