ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ – ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ – ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಕರ್ನಾಟಕ ಪೊಲೀಸ್‌ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ತಿಂಗಳ ಹಿಂದೆ ಕರ್ನಾಟಕದ ಡಿಜಿ-ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದರು. ಪ್ರವೀಣ್ ಸೂದ್‌ ನಿರ್ಗಮನದ ಬಳಿಕ ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಈಗ ಆ ಸ್ಥಾನಕ್ಕೆ ಅವರನ್ನೇ ನೇಮಿಸಿ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ: 2 ರೂ. ಲಂಚ ಪಡೆದ ಐವರು ಪೊಲೀಸರು – 37 ವರ್ಷಗಳ ಬಳಿಕ ಹೊರಬಂತು ಕೋರ್ಟ್‌ ತೀರ್ಪು!

ಇಷ್ಟು ದಿನ ಅಲೋಕ್ ಮೋಹನ್ ಅವರಿಗೆ ಡಿಜಿ – ಐಜಿಪಿ ಹುದ್ದೆ ಹೆಚ್ಚುವರಿಯಾಗಿ ನೀಡಲಾಗಿತ್ತು. ಆದರೆ ಈಗ ಆ ಹುದ್ದೆಯನ್ನು ಖಾಯಂಗೊಳಿಸಲಾಗಿದೆ. ಮತ್ತೊಂದು ಹುದ್ದೆಯಾದ ಫೈರ್ – ಎಮರ್ಜೆನ್ಸಿ ಡಿಜಿ ಸ್ಥಾನದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ಬಿಹಾರ ಮೂಲದ ಡಾ. ಅಲೋಕ್ ಮೋಹನ್ ಹಿರಿಯ ಐಪಿಎಸ್ ಅಧಿಕಾರಿಯಾಗಿದ್ದಾರೆ. ಇವರು 1987ನೇ ಬ್ಯಾಚ್​​ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿದ್ದಾರೆ. ಅಗ್ನಿಶಾಮಕ ದಳ, ತುರ್ತು ಸೇವೆಗಳ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾರಾಗೃಹ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ. 2025ರ ಏಪ್ರಿಲ್​ನಲ್ಲಿ ನಿವೃತ್ತರಾಗಲಿದ್ದಾರೆ.

suddiyaana