ಪ್ರತಿಕೂಲ ಹವಾಮಾನ – ಸತತ ನಾಲ್ಕನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ

ಪ್ರತಿಕೂಲ ಹವಾಮಾನ – ಸತತ ನಾಲ್ಕನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ

ಜಮ್ಮು: ಜಮ್ಮ ಕಾಶ್ಮೀರದಲ್ಲಿ ಭಾರಿ ಮಳೆ ಹಾಗೂ ಪ್ರತಿಕೂಲ ಹವಾಮಾನ ಇರುವ ಹಿನ್ನೆಲೆ ಸತತ ನಾಲ್ಕನೇ ದಿನವೂ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರಿ ಮಳೆಯಿಂದಾಗಿ ಜಮ್ಮು ಕಾಶ್ಮೀರದ ಹಲವೆಡೆ ಭೂ ಕುಸಿತ ಸಂಭವಿಸುತ್ತಿದೆ. ಭೂಕುಸಿತ ಉಂಟಾದ ಹಿನ್ನೆಲೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿದೆ. ಹೀಗಾಗಿ ನಾಲ್ಕನೇ ದಿನವೂ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ 15,000 ಸಾವಿರಕ್ಕೂ ಹೆಚ್ಚು ಯಾತ್ರಿಕರು ಜಮ್ಮು ಮತ್ತು ಇತರ ಸ್ಥಳಗಳಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಹಾಮಳೆಗೆ ಉತ್ತರಭಾರತ ತತ್ತರ – ಸಾವಿನ ಸಂಖ್ಯೆ 37ಕ್ಕೆ ಏರಿಕೆ

ಜಮ್ಮುವಿನಿಂದ ಇನ್ನೂ ಯಾತ್ರೆ ಪುನರಾರಂಭಗೊಂಡಿಲ್ಲ. ಜಮ್ಮು ಶಿಬಿರದಿಂದ ಕಾಶ್ಮೀರದತ್ತ ತೆರಳಲು ಹೊಸದಾಗಿ ಯಾವುದೇ ತಂಡಕ್ಕೆ ಮಂಗಳವಾರ ಅವಕಾಶ ಕಲ್ಪಿಸಿಲ್ಲ ವಿಪರೀತ ಮಳೆಯಿಂದಾಗಿ ರಂಬನ್ ಜಿಲ್ಲೆಯಲ್ಲಿ ಭೂಕುಸಿತ ಹೆಚ್ಚುತ್ತಿರುವುದು ಹೆದ್ದಾರಿ ಬಂದ್‌ ಮಾಡುವಂತೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಚಾರ ಪ್ರಾಧಿಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಿಬ್ಬಂದಿ ಇಡೀ ದಿನ ಸಾಮೂಹಿಕವಾಗಿ ಶ್ರಮಿಸಿದ್ದರ ಫಲವಾಗಿ ರಸ್ತೆ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ. ಆದರೂ ಸಂಪೂರ್ಣವಾಗಿ ಹಿಂದಿನ ಸ್ಥಿತಿಗೆ ಮರಳಲು ಇನ್ನಷ್ಟು ಸಮಯ ಬೇಕಾಗುತ್ತದೆ. ಮಂಗಳವಾರವೂ ಹೆದ್ದಾರಿ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಸಂಚಾರ ಪ್ರಾಧಿಕಾರ ಮಾಹಿತಿ ನೀಡಿದೆ.

suddiyaana