ಅಮರನಾಥ ಯಾತ್ರೆ ವೇಳೆ ಹವಾಮಾನ ವೈಪರೀತ್ಯ – 9 ಯಾತ್ರಿಗಳ ಸಾವು
ಡೆಹ್ರಾಡೂನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಹವಾಮಾನ ವೈಪರೀತ್ಯದಿಂದ ನಿರಂತರವಾಗಿ ಹಿಮ ಮತ್ತು ಮಳೆ ಸುರಿಯುತ್ತಿದೆ. ಹೀಗಾಗಿ ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆ ಅಮರನಾಥ ಯಾತ್ರೆಗೆ ಅನುಕೂಲಕರ ವಾತಾವರಣ ಇಲ್ಲದ ಕಾರಣ ಅಧಿಕಾರಿಗಳು ಯಾತ್ರೆ ಸ್ಥಗಿತಗೊಳಿಸಿದ್ದಾರೆ. ಯಾತ್ರೆ ವೇಳೆ ಕಳೆದ 48 ಗಂಟೆಗಳ ಅವಧಿಯಲ್ಲಿ 6 ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ 9ಕ್ಕೇರಿಕೆಯಾಗಿದೆ.
ಇದನ್ನೂ ಓದಿ: ಜಮ್ಮು-ಕಾಶ್ಮೀರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ – ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆ ಸ್ಥಗಿತ
ಕಳೆದ ಎರಡು ದಿನಗಳಲ್ಲಿ ಆರು ಅಮರನಾಥ ಯಾತ್ರಿಗಳು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ. ಈ ವರ್ಷದ ತೀರ್ಥಯಾತ್ರೆಯ ಸಂದರ್ಭದಲ್ಲಿ ಸಾವಿಗೀಡಾದ ಯಾತ್ರಾರ್ಥಿಗಳ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ಈ ಪೈಕಿ ಎಂಟು ಯಾತ್ರಿಗಳು ಮತ್ತು ಐಟಿಬಿಪಿ ಸಿಬ್ಬಂದಿ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರ ವಿವರಗಳನ್ನು ಮತ್ತು ಸಾವಿನ ಕಾರಣವನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ. ಆದರೆ ಪರ್ವತದಲ್ಲಿ ಕಡಿಮೆ ಆಮ್ಲಜನಕದ ಸಾಂದ್ರತೆಯಿಂದ ಪ್ರಚೋದಿಸಲ್ಪಟ್ಟ ಹೃದಯ ಸ್ತಂಭನದಿಂದಾಗಿ ಅಮರನಾಥ ಯಾತ್ರಿಕರು ಸಾವನ್ನಪ್ಪುತ್ತಿದ್ದಾರೆ ಎಂದು ಊಹಿಸಲಾಗಿದೆ. ಈ ಬಗ್ಗೆ ಕರ್ತವ್ಯದಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳು ಕೂಡ ಇಂತಹುದೇ ಸಾಮಾನ್ಯ ಕಾರಣಗಳಿಂದ ಯಾತ್ರಾರ್ಥಿಗಳು ಸಾವನ್ನಪ್ಪುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.