“ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳು” – ಅಂಬಿ ನೆನೆದು ಸುಮಲತಾ ಭಾವುಕ  

“ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳು” – ಅಂಬಿ ನೆನೆದು ಸುಮಲತಾ ಭಾವುಕ  

ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ 72 ನೇ ಜನ್ಮ ದಿನೋತ್ಸವವನ್ನು ಅವರ ಕುಟುಂಬದವರು, ಅಭಿಮಾನಿಗಳು ಆಚರಿಸಿದ್ದಾರೆ. ಅಂಬಿ ಹುಟ್ಟು ಹಬ್ಬದ ಸಲುವಾಗಿ ಸುಮಲತಾ ಅಂಬರೀಶ್‌ ಸೋಶಿಯಲ್‌ ಮೀಡಿಯಾದಲ್ಲಿ ಭಾವುಕರಾಗಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ:ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ –  ಏರ್ ಪೋರ್ಟ್‍ನಲ್ಲೇ ಲಾಕ್ ಆಗ್ತಾರಾ? 

ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ಸುಮಲತಾ, “ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳು.. ಈ ದಿನ ನಿಮ್ಮೊಟ್ಟಿಗೆ ಹಲವು ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿದ ಸಂತೋಷ, ಕಣ್ಣೀರಿನ ನೆನಪುಗಳಿಂದ ತುಂಬಿದೆ. ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ. ನೀವು ತಂದ ಅಂತ್ಯವಿಲ್ಲದ ಸಂತೋಷವು ನನ್ನ ಹೃದಯವನ್ನು ಕೃತಜ್ಞತೆಯಿಂದ ಬೆಚ್ಚಗಾಗಿಸುತ್ತದೆ ಮತ್ತು ನನ್ನ ಪ್ರತಿಯೊಂದು ಆಲೋಚನೆಯನ್ನು ಪೂರೈಸುತ್ತದೆ. ನೀವು ಎಲ್ಲಿ ವಿಶ್ರಾಂತಿ ಪಡೆಯುತ್ತೀರೋ ಅಲ್ಲಿ ನಿಮ್ಮ ಸ್ಮರಣೆಯು ನನಗೆ ಎಷ್ಟು ಅಮೂಲ್ಯ ಮತ್ತು ಉತ್ತಮ ಎಂಬುದನ್ನು ನೀವು ನೋಡಬಹುದು ಎಂದು ನಾನು ಭಾವಿಸುತ್ತೇನೆ” ಅಂತಾ ಪೋಸ್ಟ್‌ ಹಾಕಿದ್ದಾರೆ.

ನಾನು ಮಾಡುವ ಪ್ರತಿಯೊಂದು ಕೆಲಸದಲ್ಲೂ ನೀವು ನನ್ನೊಂದಿಗೆ ಇದ್ದೀರಿ ಎಂದು ನಾನು ಭಾವಿಸುತ್ತೇನೆ . ಹಾಗಾಗಿ ನಾನು ನಿಮ್ಮ ಜನ್ಮದಿನವನ್ನು ಆಚರಿಸುತ್ತೇನೆ. ಆದರೂ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ. ಲವ್ ಯು ಫಾರ್ ಎವರ್” ಎನ್ನುವ ಪೋಸ್ಟ್ ಹಂಚಿಕೊಂಡಿದ್ದಾರೆ. “ನಿನ್ನ ನೆನಪಾಗುತ್ತಿದೆ.. ಯಾವಾಗಲೂ ನಗು ತರುತ್ತದೆ.. ನಿನ್ನನ್ನು ಕಳೆದುಕೊಳ್ಳುವುದು ಯಾವಾಗಲೂ ಉಳಿಯುವ ನೋವು.. ನೀವು ನಮ್ಮ ಜೀವನದ ಒಂದು ಭಾಗ..  ಪ್ರತಿಯೊಂದು ದಿನ.. ಪ್ರತಿ ಕ್ಷಣ ಮತ್ತು ಎಂದೆಂದಿಗೂ… ನೀನು ಬದುಕನ್ನು ಮೀರಿದವನು..ನೀವೇ ಜೀವನ.. ಸ್ವರ್ಗದಲ್ಲಿ ಜನ್ಮದಿನದ ಶುಭಾಶಯಗಳು” ಎಂದು ಅದಕ್ಕೆ ಕ್ಯಾಪ್ಷನ್ ಕೊಟ್ಟಿದ್ದಾರೆ.ʼ

ಇನ್ನು ಅಂಬಿ ಹುಟ್ಟುಹಬ್ಬವನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಂಬಿ ಸಮಾಧಿ ಬಳಿ ಆಚರಿಸಿದರು. ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಬೆಳಗ್ಗೆ ಅಂಬರೀಶ್ ಸಮಾಧಿ ಬಳಿ ಆಗಮಿಸಿದ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ಅಸಂಖ್ಯಾತ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳು ಕೂಡ ತಮ್ಮ ನೆಚ್ಚಿನ ನಟನ ಸಮಾಧಿಗೆ ಪೂಜೆ ಸಲ್ಲಿಸಿದರು.

ಅಂಬರೀಶ್ ಅವರ ಹುಟ್ಟು ಹಬ್ಬದ ನಿಮಿತ್ತ ಮಂಡ್ಯದಲ್ಲಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Shwetha M