ಅಂಬಿ ಮಗನ ಮದುವೆ – ರಜಿನಿಕಾಂತ್, ಸುಹಾಸಿನಿ ಸೇರಿದಂತೆ ಗಣ್ಯರಿಂದ ಶುಭಾಶಯ
ಬೆಂಗಳೂರಿನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಮಗನ ಮದುವೆ ಅದ್ಧೂರಿಯಾಗಿ ನೆರವೇರಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮದುವೆ ಸಮಾರಂಭ ನಡೆಯಿತು. ಅಂಬಿ ಪುತ್ರನ ಕಲ್ಯಾಣೋತ್ಸವಕ್ಕೆ ಚಿತ್ರರಂಗದ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದಾರೆ. ಸೂಪರ್ ಸ್ಟಾರ್ ರಜಿನಿಕಾಂತ್, ಖ್ಯಾತ ನಟಿ ಸುಹಾಸಿನಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ: ಅಂಬಿ ಮಗನ ಅರಿಶಿನ ಶಾಸ್ತ್ರ – ಅಭಿಷೇಕ್ ಮದುವೆ ಸಮಾರಂಭಕ್ಕೆ ಸಕಲ ಸಿದ್ಧತೆ
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಪರಸ್ಪರ ಪ್ರೀತಿಸುತ್ತಿದ್ದರು. ಜೂನ್ 5ರಂದು ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಅಭಿಷೇಕ್ ಅವರು ಅವಿವಾಗೆ ಮಾಂಗಲ್ಯಧಾರಣೆ ಮಾಡಿದರು. ಸೆಲೆಬ್ರಿಟಿಗಳು, ಕುಟುಂಬದವರ ಸಮ್ಮುಖದಲ್ಲಿ ವಿವಾಹ ಕಾರ್ಯ ನೆರವೇರಿದೆ. ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಒಕ್ಕಲಿಗರ ಸಮುದಾಯದಂತೆ ಮದುವೆ ಶಾಸ್ತ್ರಗಳು ನೆರವೇರಿವೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿದೆ. ಟಾಲಿವುಡ್ ನಟ ಮೋಹನ್ ಬಾಬು, ಮನೋಜ್ ಮಂಚು ಮೊದಲಾದವರು ಆಗಮಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕೂಡಾ ಅಂಬಿ ಮಗನ ಮದುವೆಗೆ ಸಾಕ್ಷಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ದಂಪತಿ ಅಭಿ – ಅವಿವಾ ದಂಪತಿಗೆ ಶುಭಾಶಯ ಕೋರಿದ್ದಾರೆ.
ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‌ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಕೂಡಾ ಎಲ್ಲಾ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.