178 ಜನರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ! – ಆಮೇಲೆ ಏನಾಯ್ತು?

178 ಜನರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ! – ಆಮೇಲೆ ಏನಾಯ್ತು?

ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್‌ನಿಂದ ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನವೊಂದರಲ್ಲಿ ದೊಡ್ಡ ದುರಂತವೊಂದು ಸಂಭವಿಸಿದೆ. ವಿಮಾನದ ಇಂಜಿನ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಒಂದೇ ಪಂದ್ಯದಲ್ಲಿ 400 ರನ್!! ಲಾರಾ ಲೈಪ್ ಜಿಂಗಲಾಲಾ

ಡಲ್ಲಾಸ್ ಫೋರ್ಟ್ ವರ್ತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವಿಮಾನದಲ್ಲಿ 178 ಜನರು ಪ್ರಯಾಣಿಸುತ್ತಿದ್ದರು. ಈ ವೇಳೆ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕೂಡಲೇ ವಿಮಾನವನ್ನು ಡೆನ್ವರ್‌ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ಅಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಹೆಚ್ಚಾಗಿದೆ. ಅಲ್ಲದೇ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣದ ಸಿಬ್ಬಂದಿ ವಿಮಾನದಲ್ಲಿದ್ದ 6 ಸಿಬ್ಬಂದಿ ಸೇರಿದಂತೆ, 178 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಅವಘಡದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರನ್ನು ಸ್ಥಳಾಂತರಿಸುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ಪೈಲಟ್‌ ಹಾಗೂ ಏರ್‌ಪೋರ್ಟ್‌ನ ಸಿಬ್ಬಂದಿ ವಿಮಾನದಲ್ಲಿದ್ದ ಪ್ರತಿಯೊಬ್ಬರ ಸುರಕ್ಷತೆಯನ್ನು ಆಧ್ಯತೆಯಾಗಿಟ್ಟುಕೊಂಡು ತ್ವರಿತ ಮತ್ತು ನಿರ್ಣಾಯಕ ಕ್ರಮಕೈಗೊಂಡಿದ್ದಕ್ಕೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಅಮೇರಿಕನ್ ಏರ್‌ಲೈನ್ಸ್  ತಿಳಿಸಿದೆ.

ವಿಮಾನದಲ್ಲಿ ಅಗ್ನಿ ದುರಂತ ಸಂಭವಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಟ್ರಂಪ್ ನೇತೃತ್ವದಲ್ಲಿ ವಿಮಾನ ಸುರಕ್ಷತೆ ಕುಸಿಯುತ್ತಿರುವಂತೆ ತೋರುತ್ತಿದೆ. ಬಹುಶಃ ವಿಮಾನಯಾನ ಸುರಕ್ಷತಾ ಕ್ರಮಗಳನ್ನು ಕಡಿತಗೊಳಿಸಿರುವುದರಂದ ಇಂತಹ ಘಟನೆಗಳು ಸಂಭವಿಸುತ್ತಿರಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.

Shwetha M