ವಿಪತ್ತು ನಿರ್ವಹಣೆಗಾಗಿ 8 ಸಾವಿರ ಕೋಟಿ ಮೌಲ್ಯದ ಯೋಜನೆಗಳನ್ನ ಘೋಷಿಸಿದ ಅಮಿತ್ ಶಾ

ವಿಪತ್ತು ನಿರ್ವಹಣೆಗಾಗಿ 8 ಸಾವಿರ ಕೋಟಿ ಮೌಲ್ಯದ ಯೋಜನೆಗಳನ್ನ ಘೋಷಿಸಿದ ಅಮಿತ್ ಶಾ

ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗುತ್ತಿದ್ದು, ಇವತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ರು. ವಿಪತ್ತು ನಿರ್ವಹಣೆಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಚಿವರ ಜತೆ ಸಭೆ ನಡೆಸಿದ್ದು,   8000 ಕೋಟಿ ರೂಪಾಯಿ ಮೌಲ್ಯದ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.

ಇದನ್ನೂ ಓದಿ : ಗುಜರಾತ್ ನಲ್ಲಿ ವಿನಾಶ ಸೃಷ್ಟಿಸುತ್ತಿದೆ ಬಿಪರ್ ಜಾಯ್ ಚಂಡಮಾರುತ – ಕರ್ನಾಟಕದಲ್ಲೂ ಜನರ ನೆಮ್ಮದಿ ಕಸಿದ ಸೈಕ್ಲೋನ್

ರಾಜ್ಯಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು ಒಟ್ಟು ರೂ 5,000 ಕೋಟಿಗಳ ಯೋಜನೆ ಘೋಷಣೆ ಮಾಡಿದ್ದಾರೆ. ಹಾಗೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ಮಹಾನಗರಗಳಾದ ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಅಹಮದಾಬಾದ್ ಮತ್ತು ಪುಣೆಗೆ ರೂ 2,500 ಕೋಟಿ ಹಣ ಅನುದಾನ ಯೋಜನೆ ಮತ್ತು ನಗರ ಪ್ರವಾಹದ ಅಪಾಯವನ್ನು ಕಡಿಮೆ ಮಾಡಲು ಮತ್ತು ಭೂಕುಸಿತವನ್ನು ತಗ್ಗಿಸಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 825 ಕೋಟಿ ರೂಪಾಯಿಗಳ ಯೋಜನೆಯನ್ನು ಸಚಿವರು ಘೋಷಿಸಿದ್ದಾರೆ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ವಿಪತ್ತು ನಿರ್ವಹಣೆ ಬಗ್ಗೆ ಸಚಿವರ ಸಭೆಯ ನಂತರ ಮಾತನಾಡಿದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಳೆದ ಒಂಬತ್ತು ವರ್ಷಗಳಲ್ಲಿ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಈ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿವೆ. ಯಾರೂ ಅದನ್ನು ನಿರಾಕರಿಸಲು ಸಾಧ್ಯವಿಲ್ಲ. ಆದರೆ ನಾವು ಹೀಗೆ ಇರುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ವಿಪತ್ತುಗಳು ಅವುಗಳ ಸ್ವರೂಪವನ್ನು ಬದಲಾಯಿಸಿವೆ. ಅವುಗಳ ಆವರ್ತನ ಮತ್ತು ತೀವ್ರತೆಯು ಹೆಚ್ಚಾಗಿದೆ. ನಾವು ಹೆಚ್ಚು ವ್ಯಾಪಕವಾದ ಯೋಜನೆಯನ್ನು ಮಾಡಬೇಕಾಗಿದೆ ಎಂದಿದ್ದಾರೆ.

suddiyaana